ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ #JNNCE ಮ್ಯಾನೇಜ್ಮೆಂಟ್ ಸ್ಟಡೀಸ್ ವಿಭಾಗದ ವತಿಯಿಂದ ಭಾರತೀಯ ವಾಣಿಜ್ಯ ಶಾಲೆ, ಎಂಟಿಸಿ ಗ್ಲೋಬಲ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಸಂಯುಕ್ತಾಶ್ರಯದಲ್ಲಿ ಜ.10,11 ರಂದು ಎರಡು ದಿನಗಳ ಕಾಲ ಕಾಲೇಜಿನ ಸರ್.ಎಂ.ವಿ ಸಭಾಂಗಣದಲ್ಲಿ ʼಉದ್ದಿಮೆ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ – ಬ್ಯಾಂಕ್ ಮತ್ತು ತಂತ್ರಜ್ಞಾನಗಳ ಪಾತ್ರʼ ಕುರಿತಾಗಿ ಅಂತರಾಷ್ಟ್ರೀಯ ವಿಚಾರ ಸಂಕಿರಣ ಏರ್ಪಡಿಸಲಾಗಿದೆ.
Also read: ಅಣಬೆಯನ್ನು ಮನೆಯಲ್ಲೇ ವರ್ಷವಿಡೀ ಬೆಳೆಯಬಹುದೇ? ಲಾಭವಿದೆಯೇ? ಇಲ್ಲಿದೆ ಕೃಷಿ ವಿವಿ ಕೊಟ್ಟ ಮಾಹಿತಿ
ಜ.10 ರ ಶುಕ್ರವಾರ ಬೆಳಗ್ಗೆ 10:00 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಅಹಮದಾಬಾದ್ ಐಐಎಂ ನಿವೃತ್ತ ಪ್ರಾಧ್ಯಾಪಕ ಪ್ರೊ.ಮುಕುಂದ.ಆರ್.ದೀಕ್ಷಿತ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಹೈದರಾಬಾದ್ ಐಸಿಬಿಎಂ ಸ್ಕೂಲ್ ಆಫ್ ಬ್ಯುಸಿನೆಸ್ ಎಕ್ಸಲೆನ್ಸ್ ಪ್ರಧಾನ ನಿರ್ದೇಶಕ ಡಾ.ಪಿ.ನಾರಾಯಣ ರೆಡ್ಡಿ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಕರ್ನಾಟಕ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಜಯನಾಗರಾಜ ರಾವ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಅಧ್ಯಕ್ಷ ಗೋಪಿನಾಥ ಭಾಗವಹಿಸಲಿದ್ದಾರೆ. ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ವಿಭಾಗದ ನಿರ್ದೇಶಕ ಡಾ.ಶ್ರೀಕಾಂತ್, ಕಾರ್ಯಕ್ರಮ ಸಂಯೋಜಕರಾದ ಡಾ.ಜಿ.ಪಿ.ನಾಗೇಶ್, ಡಾ.ಹರ್ಷಾ ಮಥಡ್, ಡಾ.ಶರ್ಮ.ಕೆ.ಆರ್.ಎಸ್ ಉಪಸ್ಥಿತರಿರಲಿದ್ದಾರೆ.
ಜ.11 ರ ಶನಿವಾರ ಸಂಜೆ 04:00 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಎನ್‌ಇಎಸ್ ಡಾ.ಪಿ.ನಾರಾಯಣ್, ಕುವೆಂಪು ವಿವಿ ಪ್ರಾಧ್ಯಾಪಕ ಡಾ.ಟಿ.ಮಂಜುನಾಥ ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















