ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಾಜ್ಯ ಕಿಯೋನಿಕ್ಸ್ ನಿರ್ದೇಶಕರಾಗಿ ಬಿಜೆಪಿ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕ ಪ್ರಶಾಂತ್ ಪಂಡಿತ್ ಅವರನ್ನು ನಿಯೋಜಿಸಲಾಗಿದೆ.

ಈ ಕುರಿತಂತೆ ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದು, ಮುಂದಿನ ಆದೇಶದವರೆಗೂ ನಿರ್ದೇಶಕರಾಗಿ ಪ್ರಶಾಂತ್ ಅವರನ್ನು ನಿಯೋಜಿಸಲಾಗಿದೆ.
ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕರಾಗಿರುವ ಪ್ರಶಾಂತ್, ಆಯುಷ್ಮಾನ್ ಭಾರತ್ ಕಾರ್ಡ್‌ಗಳು ಹೆಚ್ಚು ಜನರಿಗೆ ತಲುಪುವಲ್ಲಿ ಶ್ರಮಿಸಿದ ತಂಡದಲ್ಲಿ ಗುರುತಿಸಿಕೊಂಡಿದ್ದಾರೆ.
ಕಿಯೋನಿಕ್ಸ್’ಗೆ ನೇಮಕಗೊಂಡಿರುವ ಇವರನ್ನು ಸಂಸದ ಬಿ.ವೈ. ರಾಘವೇಂದ್ರ, ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲಾಧ್ಯಕ್ಷ ಮೇಘರಾಜ್, ಜಿಪಂ ಸದಸ್ಯ ಕೆ.ಇ. ಕಾಂತೇಶ್, ರಾಜ್ಯ ಆರ್ಯವೈಶ್ಯ ನಿಮಗದ ಅಧ್ಯಕ್ಷ ಡಿ.ಎಸ್. ಅರುಣ್ ಸೇರಿದಂತೆ ಹಲವರು ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















