ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಹಾನಗರ ಪಾಲಿಕೆ ವತಿಯಿಂದ ನಡೆಯುವ ನವರಾತ್ರಿ ವೈಭವ/ದಸರಾಗೆ ಇಂದು ಅಧಿಕೃತ ಚಾಲನೆ ನೀಡಲಾಗಿದೆ.
ಕೋಟೆ ಚಂಡಿಕಾ ದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ಬೆಳ್ಳಿ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಸಲ್ಲಿರುವ ಮೂಲಕ ಶಿವಮೊಜಗ್ಗ ದಸರಾಗೆ ಇಂದು ಅಧಿಕೃತ ಚಾಲನೆ ನೀಡಲಾಯಿತು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿ ಗೌಡ ಅವರು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶಿವಮೊಗ್ಗ ದಸರಾಗೆ ಅಧಿಕೃತ ಚಾಲನೆ ನೀಡಿದರು.
ಇದಕ್ಕೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಅಂಬಾರಿ ಹಾಗೂ ಚಾಮುಂಡೇಶ್ವರಿ ದೇವಿಯನ್ನು ಪಾಲಿಕೆ ಆವರಣದಿಂದ ಕೋಟೆ ಚಂಡಿಕಾ ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ತರಲಾಯಿತು.
5 ಲಕ್ಷ ರೂ. ವೆಚ್ಚದಲ್ಲಿ ಚಿನ್ನದ ಕಿರೀಟವನ್ನು ಚಾಮುಂಡೇಶ್ವರಿಗೆ ಸಮರ್ಪಿಸಲಾಯಿತು. ತುಳಸಿ ಗೌಡ ಅವರು ಮಹಿಳೆಯರಿಗೆ ಕುಂಕುಮ ಹಾಗೂ ಬಾಗಿನ ನೀಡುವ ಮೂಲಕ ಸಂತೋಷ ವ್ಯಕ್ತಪಡಿಸಿದರು.
ಮಾಜಿ ಸಚಿವ, ಶಾಸಕ ಕೆ.ಎಸ್. ಈಶ್ವರಪ್ಪ, ಮೇಯರ್ ಸುನೀತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ, ಪಾಲಿಕೆ ಸದಸ್ಯರಾದ ಚನ್ನಬಸಪ್ಪ, ಸುರೇಖಾ ಮುರಳೀಧರ್, ಧೀರರಾಜ್ ಹೊನ್ನವಿಲೆ, ಪ್ರತಿಪಕ್ಷ ನಾಯಕಿ ರೇಖಾ ರಂಗನಾಥ್, ಯಮುನಾ ರಂಗೇಗೌಡ, ಎಚ್.ಸಿ. ಯೋಗೀಶ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post