ಕಲ್ಪ ಮೀಡಿಯಾ ಹೌಸ್ | ಶಿವನಿ |
17309 ಸಂಖ್ಯೆಯ ಯಶವಂತಪುರ-ವಾಸ್ಕೋ ಡ ಗಾಮಾ ಎಕ್ಸ್’ಪ್ರೆಸ್ ರೈಲು #Yashavanthapura-Vascodagama Express Train ಹೆಚ್ಚುವರಿ ನಿಲುಗಡೆಗೆ ಶಿವನಿ ನಿಲ್ದಾಣದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ #Minister V Somanna ಅವರು ಹಸಿರು ನಿಶಾನೆ ತೋರಿಸಿದರು.
ನಂತರ ಬೀರೂರು ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮತ್ತು ಸೌಲಭ್ಯಗಳನ್ನು ಅವರು ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ 61ಕ್ಕೂ ಹೆಚ್ಚು ಅಮೃತ ಭಾರತ ಸ್ಟೇಷನ್ ಯೋಜನೆ ಕಾಮಗಾರಿಗಳು ನಡೆಯುತ್ತಿವೆ. ಇವು ಪ್ರಯಾಣಿಕರ ಸೌಲಭ್ಯಗಳನ್ನು ಹಾಗೂ ಮೂಲಸೌಕರ್ಯವನ್ನು ಪರಿವರ್ತಿಸುವ ಉದ್ದೇಶ ಹೊಂದಿವೆ ಎಂದು ಹೇಳಿದರು.

ಈಗಾಗಲೇ, 97% ವಿದ್ಯುದೀಕರಣ ಕಾರ್ಯ ಪೂರ್ಣಗೊಂಡಿದ್ದು, ಉಳಿದ 100% ಕಾರ್ಯವನ್ನು 2025ರ ಡಿಸೆಂಬರ್ ಒಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. 644 ಲೆವೆಲ್ ಕ್ರಾಸಿಂಗ್ ಬದಲಿಗೆ ರಸ್ತೆ ಮೇಲ್ಸೇತುವೆ ಮತ್ತು ಕೆಳಸೇತುವೆಗಳನ್ನು ನಿರ್ಮಿಸಲಾಗಿದೆ ಎಂದರು.
ಇನ್ನು, ವಿಕಲಚೇತನ ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ನೀಡಲು ಮತ್ತು ಎಲ್ಲಾ ಪ್ರಯಾಣಿಕರಿಗೆ ಸುಧಾರಿತ ಸೌಲಭ್ಯಗಳನ್ನು ಒದಗಿಸಲು ಭಾರತೀಯ ರೈಲ್ವೆ ಬದ್ಧವಾಗಿದೆ ಎಂದು ಹೇಳಿದರು.
ಒನ್ ಸ್ಟೇಶನ್, ಒನ್ ಪ್ರಾಡಕ್ಟ್ ಯೋಜನೆಯಡಿ 89 ರೈಲು ನಿಲ್ದಾಣಗಳಲ್ಲಿ ಸ್ಥಳೀಯ ಕಲೆಗಾರರು ಮತ್ತು ಉತ್ಪಾದಕರಿಗೆ ಪ್ರೋತ್ಸಾಹ ನೀಡಲು ಮಳಿಗೆಗಳನ್ನು ತೆರೆಯಲಾಗಿದೆ ಎಂದರು.

ಯಶವಂತಪುರ-ವಾಸ್ಕೋ ಡ ಗಾಮಾ ಎಕ್ಸ್’ಪ್ರೆಸ್ ರೈಲನ್ನು ಶಿವನಿ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯಿಂದ ಶಿವನಿ ಹಾಗೂ ಸುತ್ತಮುತ್ತಲಿನ ಪ್ರದೇಶದ ಪ್ರಯಾಣಿಕರು ನೇರ ಸಂಪರ್ಕವನ್ನು ಪಡೆಯಲಿದ್ದು, ಬೆಂಗಳೂರು, ಹುಬ್ಬಳ್ಳಿ, ಗೋವಾ ಮುಂತಾದ ಪ್ರಮುಖ ಸ್ಥಳಗಳಿಗೆ ಸುಲಭ ಪ್ರಯಾಣ ಸಾಧ್ಯವಾಗಲಿದೆ. ಇದರಿಂದ ಪ್ರಾದೇಶಿಕ ಸಂಚಾರ ಮತ್ತು ಸಂಪರ್ಕತೆ ಸುಧಾರಣೆ ಆಗಲಿದೆ.
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಎಚ್. ಶ್ರೀನಿವಾಸ, ಸ್ಥಳೀಯ ಪ್ರತಿನಿಧಿಗಳು, ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶ್ರೀ ಮುದಿತ್ ಮಿತ್ತಲ್, ಹಿರಿಯ ರೈಲ್ವೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post