ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೂತನ ಮೇಯರ್ ಆಗಿ ಶಿವಕುಮಾರ್, ಉಪ ಮೇಯರ್ ಆಗಿ ಲಕ್ಷ್ಮಿಶಂಕರ ನಾಯ್ಕ್ ಅವರು ಆಯ್ಕೆಯಾಗಿದ್ದಾರೆ.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಚುನಾವಣೆ ನಡೆಸಲಾಯಿತು. ಮೇಯರ್ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು.
ಬಿಜೆಪಿಯಿಂದ ಗುರುಪುರ – ಪುರಲೆ ವಾರ್ಡ್ ಪಾಲಿಕೆ ಸದಸ್ಯ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದಿಂದ ಮಲವಗೊಪ್ಪದ ವಾರ್ಡ್ ಪಾಲಿಕೆ ಸದಸ್ಯ ಆರ್.ಸಿ. ನಾಯ್ಕ್ ಸ್ಪರ್ಧೆ ಮಾಡಿದ್ದರು.
ಚುನಾವಣೆಯಲ್ಲಿ ಬಿಜೆಪಿಯ ಶಿವಕುಮಾರ್ ಅವರಿಗೆ 26 ಮತಗಳು ಲಭಿಸಿವೆ. ಜೆಡಿಎಸ್ -ಕಾಂಗ್ರೆಸ್ ಒಮ್ಮತದ ಅಭ್ಯರ್ಥಿ ಆರ್.ಸಿ.ನಾಯ್ಕ್ ಅವರಿಗೆ 11 ಮತಗಳು ಸಿಕ್ಕಿವೆ.
ಇನ್ನು, ಉಪ ಮೇಯರ್ ಸ್ಥಾನ ಬಿಸಿಎಂ (ಎ) ವರ್ಗದ ಮಹಿಳೆಗೆ ಮೀಸಲಾಗಿತ್ತು. ಬಿಜೆಪಿಯಿಂದ ನ್ಯೂ ಮಂಡ್ಲಿ ವಾರ್ಡ್ ಸದಸ್ಯೆ ಲಕ್ಷ್ಮಿಶಂಕರ ನಾಯ್ಕ್ ಮತ್ತು ಕಾಂಗ್ರೆಸ್ ಪಕ್ಷದಿಂದ ಹೊಸಮನೆ ವಾರ್ಡ್ ಸದಸ್ಯೆ ರೇಖಾ ರಂಗನಾಥ್ ಅವರು ಸ್ಪರ್ಧೆ ಮಾಡಿದ್ದರು.
ಅಂತಿಮವಾಗಿ ಲಕ್ಷ್ಮಿ ಶಂಕರನಾಯ್ಕ್ ಅವರಿಗೆ 26 ಮತಗಳು ಲಭಿಸಿವೆ. ರೇಖಾ ರಂಗನಾಥ್ ಅವರಿಗೆ 11 ಮತಗಳು ಒಲಿದಿವೆ. ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲನ್ ಬಿಸ್ವಾಸ್ ಅವರು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















