ಕಲ್ಪ ಮೀಡಿಯಾ ಹೌಸ್ | ರಿಪ್ಪನ್ ಪೇಟೆ |
ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸೇರಿದಂತೆ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಗರ್ತಿಕೆರೆಯಲ್ಲಿ ನಡೆದಿದೆ.
ನದೀಮ್ (22), ಚಿನ್ನಪ್ಪ (54) ಗಾಯಾಳುಗಳಾಗಿಗಿದ್ದು, ನದೀಮ್ ಬೈಕಿನಲ್ಲಿ ಗರ್ತಿಕೆರೆ ಕಡೆಯಿಂದ ಮನೆಗೆ ತೆರಳುವಾಗ ದುರ್ಘಟನೆ ನಡೆದಿದೆ. ಪಾದಚಾರಿ ಚಿನ್ನಪ್ಪ ಅವರಿಗೆ ಬೈಕ್ ಡಿಕ್ಕಿಯಾಗಿ ನಂತರ ಬೈಕ್ ಪ್ರೌಢಶಾಲಾ ನಾಮಫಲಕಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರಿಗೂ ತಲೆಗೆ ತೀವ್ರವಾದ ಪೆಟ್ಟು ಬಿದ್ದಿದೆ. ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post