ಕಲ್ಪ ಮೀಡಿಯಾ ಹೌಸ್ | ಅರುಣಾಚಲ ಪ್ರದೇಶ |
2024ರ ವರ್ಷದಲ್ಲಿ ದೇಶದಾದ್ಯಂತ ಬಿಜೆಪಿಗೆ #BJP ಮೊದಲ ಜಯದ ಸೂಚನೆ ದೊರೆತಿದ್ದು, ಅರುಣಾಚಲ ಪ್ರದೇಶವೇ #ArunachalPradesh ಇದರ ಮೊದಲ ಹೆಜ್ಜೆಯಾಗಿದೆ.
ವರದಿಗಳಂತೆ, ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 10 ಸ್ಥಾನಗಳನ್ನು ಅವಿರೋಧವಾಗಿ ಗೆಲ್ಲುವುದು ಬಹುತೇಕ ನಿಶ್ಚಯಗೊಂಡಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ #AssemblyElection ಅವಿರೋಧವಾಗಿ ಆಯ್ಕೆಯಾದ 10 ಬಿಜೆಪಿ ಅಭ್ಯರ್ಥಿಗಳಲ್ಲಿ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮತ್ತು ಅವರ ಉಪ ಚೌನಾ ಮೇನ್ ಸೇರಿದ್ದಾರೆ ಎಂದು ವರದಿಯಾಗಿದೆ.
ಖಂಡು ಮತ್ತು ಇತರೆ ಒಂಬತ್ತು ಮಂದಿ ನಾಮಪತ್ರ ಹಿಂಪಡೆಯುವ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ (ಸಿಇಒ) ಪವನ್ ಕುರ್ಮಾ ಸೇನ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ ನಾಮಪತ್ರ ಸಲ್ಲಿಕೆಯಾಗಿದ್ದು, ಉಳಿದ ನಾಲ್ಕು ಕ್ಷೇತ್ರಗಳಲ್ಲಿ ವಿರೋಧ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post