ಕಲ್ಪ ಮೀಡಿಯಾ ಹೌಸ್ | ಅರುಣಾಚಲ ಪ್ರದೇಶ |
2024ರ ವರ್ಷದಲ್ಲಿ ದೇಶದಾದ್ಯಂತ ಬಿಜೆಪಿಗೆ #BJP ಮೊದಲ ಜಯದ ಸೂಚನೆ ದೊರೆತಿದ್ದು, ಅರುಣಾಚಲ ಪ್ರದೇಶವೇ #ArunachalPradesh ಇದರ ಮೊದಲ ಹೆಜ್ಜೆಯಾಗಿದೆ.
ವರದಿಗಳಂತೆ, ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 10 ಸ್ಥಾನಗಳನ್ನು ಅವಿರೋಧವಾಗಿ ಗೆಲ್ಲುವುದು ಬಹುತೇಕ ನಿಶ್ಚಯಗೊಂಡಿದೆ.
ಆ ರಾಜ್ಯದಲ್ಲಿ ಬಿಜೆಪಿ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳಿಗೆ ಅಭ್ಯರ್ಥಿಗಳನ್ನು ಹುಡುಕಲು ಸಾಧ್ಯವಾಗಿಲ್ಲ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ #AssemblyElection ಅವಿರೋಧವಾಗಿ ಆಯ್ಕೆಯಾದ 10 ಬಿಜೆಪಿ ಅಭ್ಯರ್ಥಿಗಳಲ್ಲಿ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮತ್ತು ಅವರ ಉಪ ಚೌನಾ ಮೇನ್ ಸೇರಿದ್ದಾರೆ ಎಂದು ವರದಿಯಾಗಿದೆ.
ಖಂಡು ಮತ್ತು ಇತರೆ ಒಂಬತ್ತು ಮಂದಿ ನಾಮಪತ್ರ ಹಿಂಪಡೆಯುವ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ (ಸಿಇಒ) ಪವನ್ ಕುರ್ಮಾ ಸೇನ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ತವಾಂಗ್ ಜಿಲ್ಲೆಯ ಮುಕ್ತೋ ವಿಧಾನಸಭಾ ಕ್ಷೇತ್ರದಿಂದ ಖಂಡು ಮಾತ್ರ ನಾಮಪತ್ರ ಸಲ್ಲಿಸಿದ್ದು, ಉಪಮುಖ್ಯಮಂತ್ರಿ ಚೌನಾ ಮೇನ್ ಅವರು ತಮ್ಮ ಏಕೈಕ ಪ್ರತಿಸ್ಪರ್ಧಿ ಕಾಂಗ್ರೆಸ್ ಬಯಾಮ್ಸೊ ಕ್ರಿ ಶನಿವಾರ ನಾಮಪತ್ರ ಹಿಂಪಡೆದ ನಂತರ ಚೌಕಂ ಸ್ಥಾನವನ್ನು ಅವಿರೋಧವಾಗಿ ಗೆದ್ದಿದ್ದಾರೆ ಎಂದು ಅವರು ಹೇಳಿದರು.
ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ ನಾಮಪತ್ರ ಸಲ್ಲಿಕೆಯಾಗಿದ್ದು, ಉಳಿದ ನಾಲ್ಕು ಕ್ಷೇತ್ರಗಳಲ್ಲಿ ವಿರೋಧ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post