ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಇಂದು ಮಲೆನಾಡ ಹೆಬ್ಬಾಗಿಲು ಅಕ್ಷರಶಃ ಬೆಚ್ಚಿಬೀಳುವ ಶಾಕಿಂಗ್ ನ್ಯೂಸ್ ಹೊರಬಿದ್ದು, ಇಂದು ಒಂದೇ ದಿನ ಜಿಲ್ಲೆಯಲ್ಲಿ 9 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಈ ಕುರಿತಂತೆ ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇದರಂತೆ ಇಂದು ಜಿಲ್ಲೆಯಲ್ಲಿ 9 ಪಾಸಿಟಿವ್ ಪ್ರಕರಣಗಳ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 51ಕ್ಕೆ ಏರಿಕೆಯಾಗಿದೆ.
9ರಲ್ಲಿ ಏಳು ಮಂದಿ ಬೆಂಗಳೂರು ಟ್ರಾವೆಲ್ ಹಿಸ್ಟರಿ ಹೊಂದಿದ್ದಾರೆ ಎಂದು ಹೇಳಲಾಗಿದ್ದು, ಇನ್ನಿಬ್ಬರ ಕುರಿತಾಗಿ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.
ಇನ್ನು, ಈವರೆಗೂ ಜಿಲ್ಲೆಯಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 51ಕ್ಕೆ ಏರಿಕೆಯಾಗಿದ್ದು, ಗುಣಮುಖಗೊಂಡು ಇಂದು ಬಿಡುಗಡೆಯಾದವರು ಇಬ್ಬರು.
Get in Touch With Us info@kalpa.news Whatsapp: 9481252093

















