ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ನಿನ್ನೆ ಸಂಭವಿಸಿದ ಭಾರೀ ಅಗ್ನಿ ಅನಾಹುತದಲ್ಲಿ 43 ಮಂದಿ ಸಜೀವ ದಹನವಾದ ಧಗೆ ಇನ್ನೂ ಆರುವ ಮುನ್ನವೇ ಇದೇ ಪ್ರದೇಶದಲ್ಲಿ ಇಂದು ಮತ್ತೆ ಅಗ್ನಿ ಅವಘಡ ಸಂಭವಿಸಿದೆ.
ದೆಹಲಿಯ ಅನಜ್ ಮಂಡಿ ಕಟ್ಟಡದಲ್ಲಿ ನಿನ್ನೆ ಅಗ್ನಿ ದುರಂತ ಸಂಭವಿಸಿ 43 ಮಂದಿ ಸಾವಿಗೀಡಾಗಿದ್ದರು. ಆದರೆ, ಇದೀಗ ಮತ್ತದೇ ಕಟ್ಟಡದಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದ್ದು ಆತಂಕಕ್ಕೆ ಕಾರಣವಾಗಿದೆ.
ಘಟನೆ ಸಂಭವಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ನಾಲ್ಕು ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಘಟನೆಯಲ್ಲಿ ಯಾವುದೇ ರೀತಿಯ ಸಾವು-ನೋವುಗಳು ಸಂಭವಿಸಿರುವುದಾಗಿ ವರದಿಗಳಾಗಿಲ್ಲ.
ಇದೇ ಪ್ರದೇಶದಲ್ಲಿ ನಿನ್ನೆ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ 43 ಮಂದಿ ಮೃತರಾಗಿದ್ದು, ಸುಮಾರು 30 ಅಗ್ನಿಶಾಮಕ ದಳದ ವಾಹನಗಳು ಹಾಗೂ 150 ಅಗ್ನಿ ಶಾಮಕ ಸಿಬ್ಬಂದಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಸುಮಾರು 63ಕ್ಕೂ ಅಧಿಕ ಜನರನ್ನು ರಕ್ಷಣೆ ಮಾಡಿದ್ದರು.
Get in Touch With Us info@kalpa.news Whatsapp: 9481252093
















