ಕಲ್ಪ ಮೀಡಿಯಾ ಹೌಸ್
ಶ್ರೀಹರಿಕೋಟ: ಭಾರತವು ತನ್ನ ಅತ್ಯಾಧುನಿಕ ಜಿಯೋ-ಇಮೇಜಿಂಗ್ ಉಪಗ್ರಹ ಜಿಎಸ್‌ಎಲ್‌ವಿ-ಎಫ್ 10/ಇಒಎಸ್-03ಯನ್ನು ಆಗಸ್ಟ್ 12ರ ನಾಳೆ ಬೆಳಗ್ಗೆ 5.43ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಕೇಂದ್ರದಿಂದ ಉಡಾಯಿಸಲಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಇಂದು ಬುಧವಾರ ನಸುಕಿನ ಜಾವ 3.43ಕ್ಕೆ ಉಡಾವಣೆಗೆ 26 ಗಂಟೆಗಳ ಕ್ಷಣಗಣನೆ ಆರಂಭವಾಯಿತು. ಇಒಎಸ್-03 ಉಪಗ್ರಹವನ್ನು ಜಿಎಸ್ ಎಲ್ ವಿ-ಎಫ್-10ನ್ನು ಹೊತ್ತೊಯ್ಯಲಿದೆ ಎಂದು ಇಸ್ರೊ ತಿಳಿಸಿದೆ.
ಇದು ನಾಗರಿಕ ಮತ್ತು ಕಾರ್ಯತಂತ್ರದ ಪ್ರಾಮುಖ್ಯತೆಯನ್ನು ಇಸ್ರೋದ ಜಿಎಸ್‌ಎಲ್‌ವಿ-ಎಫ್ 10 ರಾಕೆಟ್ ಮೂಲಕ ಕಕ್ಷೆಗೆ ಸೇರಿಸಲಿದ್ದು, 2 ಸಾವಿರದ 268 ಕೆಜಿ ತೂಕದ ಜಿಎಸ್‌ಎಲ್‌ವಿ-ಎಫ್ 10 ಸಂಕೇತನಾಮ ಇಒಎಸ್ -3, ಜಿಯೋ-ಉಪಗ್ರಹಗಳ ಹೊಸ ಸರಣಿಯ ಭಾಗವಾಗಿದೆ. ಹಾಗೂ ಭಾರತ ನಿರ್ಮಿತ ಪ್ರಮುಖ ಉಪಗ್ರಹದ ಈ ವರ್ಷದ ಮೊದಲ ಉಡಾವಣೆ ಇದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post