ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಜಮ್ಮು ಮತ್ತು ಕಾಶ್ಮೀರದ #Jammu and Kashmir ರಿಯಾಸಿ ಜಿಲ್ಲೆಯಲ್ಲಿ ಭಯೋತ್ಪಾದಕ ದಾಳಿ #Terrorist attack ನಡೆದಿದ್ದು, ಶಿವಖೋಡಿಯಿಂದ ಕತ್ರಾಗೆ ತೆರಳುತ್ತಿದ್ದ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದು, 10 ಮಂದಿ ಯಾತ್ರಿಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶಿವಖೋಡಿಯಿಂದ ಕತ್ರಾಗೆ ತೆರಳುತ್ತಿದ್ದ ಬಸ್ ಮೇಲೆ ಉಗ್ರರು 30ರಿಂದ 40 ಸುತ್ತು ಗುಂಡು ಹಾರಿಸಿದ ಪರಿಣಾಮ ಬಸ್ ಚಾಲಕನಿಗೆ ಬುಲೆಟ್ ತಗುಲಿ, ವಾಹನದ ಮೇಲೆ ಸಮತೋಲನ ಕಳೆದುಕೊಂಡು ಬಸ್ ಆಳವಾದ ಕಂದಕಕ್ಕೆ ಬಿದ್ದಿದೆ. ಬಸ್ ಕಂದಕಕ್ಕೆ ಬಿದ್ದ ಪರಿಣಾಮ 10 ಮಂದಿ ಯಾತ್ರಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 33 ಮಂದಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ನಾರಾಯಣ ಆಸ್ಪತ್ರೆ ಮತ್ತು ರಿಯಾಸಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಯಿತು.
Also read: ಮಾವಿನ ಕಾಯಿ ಕೀಳುವ ವೇಳೆ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವು | ಘಟನೆ ನಡೆದಿದ್ದೆಲ್ಲಿ?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post