ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಕಣಿವೆ ರಾಜ್ಯ ಜಮ್ಮು ಕಾಶ್ಮೀರದ #Jammu Kashmir ಕುಲ್ಗಾಂ ಜಿಲ್ಲೆಯಲ್ಲಿ ಗುಂಡಿ ಸದ್ದು ಕೇಳಿಬಂದಿದ್ದು, ಸೇನೆ #Army ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಐವರು ಉಗ್ರರನ್ನು ವೀರ ಯೋಧರು ಸದೆ ಬಡಿದಿದ್ದಾರೆ.
ಕುಲ್ಗಾಂ ಜಿಲ್ಲೆಯ ಬೇಹಿಬಾಗ್ ಪ್ರದೇಶದಲ್ಲಿ ಉಗ್ರರು #Terrorist ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಸೇನೆ ಕಾರ್ಯಾಚರಣೆ ನಡೆಸಿದೆ. ನಿನ್ನೆ ರಾತ್ರಿಯಿಂದಲೇ ಸೇನೆ ಕಾರ್ಯಾಚರಣೆ ನಡೆದಿದ್ದು, ಐವರು ಉಗ್ರರನ್ನು ಎನ್’ಕೌಂಟರ್ ಮಾಡುವಲ್ಲಿ ಯಶಸ್ವಿಯಾಗಿದೆ.
ಇಂದು ಬೆಳಿಗ್ಗೆಯೂ ಕಾರ್ಯಾಚರಣೆ ಮುಂದುವರೆದಿದ್ದು, ಉಗ್ರರು ಅಡಗಿ ಕುಳಿತಿದ್ದ ಸ್ಥಳದತ್ತ ಭದ್ರತಾ ಪಡೆಗಳು ತಲುಪುತ್ತಿದ್ದಂತೆಯೇ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು.
Also read: ಶಾಲಾ ಪ್ರವಾಸದ ವೇಳೆ ಮತ್ತೊಂದು ದುರಂತ | ಕೊಪ್ಪಳದ ವಿದ್ಯಾರ್ಥಿ ಭಟ್ಕಳದಲ್ಲಿ ದುರ್ಮರಣ | ಏನಾಯ್ತು?
ಈ ವೇಳೆ ಕಾರ್ಯಾಚರಣೆಯನ್ನು ಎನ್’ಕೌಂಟರ್ #Encounter ಆಗಿ ಪರಿವರ್ತಿಸಿದ ಸೇನಾಪಡೆ ಸ್ಥಳವನ್ನು ಸುತ್ತುವರೆದು, ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಿದರು.
ಇದರಂತೆ ಐವರನ್ನು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಈ ನಡುವೆ ಕಾರ್ಯಾಚರಣೆ ವೇಳೆ ಇಬ್ಬರು ಯೋಧರಿಗೂ ಗಾಯಗಳಾಗಿವೆ ಎಂದು ವರದಿಯಾಗಿದೆ.
ಇನ್ನೂ ಕೆಲ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post