ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಪೂಂಛ್ ಜಿಲ್ಲೆಯ ಪೋಶನಾ ನದಿಯಲ್ಲಿ ಕರ್ತವ್ಯ ನಿರ್ವಹಣೆ ವೇಳೆ ಭಾರತೀಯ ಸೇನೆಯ Indian Army ಇಬ್ಬರು ಸೈನಿಕರು ನೀರು ಪಾಲಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾಗ ನದಿಯನ್ನು ದಾಟುವ ವೇಳೆ ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾರೆ ಎಂದು ತಿಳಿದುಬಂದಿದೆ.
ಭಾರತೀಯ ಸೇನೆಯ ನಾಯಬ್ ಸುಬೇದಾರ್ ಕುಲದೀಪ್ ಸಿಂಗ್ ಪ್ರವಾಹದಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆ ಅವಾಂತರ ಮುಂದುವರೆದಿದೆ, ಭಾರಿ ಮಳೆ ಮತ್ತು ಪ್ರತೀಕೂಲ ಹವಾಮಾನದಿಂದಾಗಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
Also read: ಎನ್ ಜಿ ಓ ಮಹಿಳಾ ಪದಾಧಿಕಾರಿಗಳ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ: ಸೈಬರ್ ಕ್ರೈಂ ಗೆ ದೂರು











Discussion about this post