ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ Jammu and Kashmira ಸೇನಾ ಯೋಧರು Army Warriors ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಬೆಮಿನಾ ಪ್ರದೇಶದಲ್ಲಿ ಯೋಧರು ಕಾರ್ಯಾಚರಣೆ ನಡೆಸಲಾಗಿದ್ದು, ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರನ್ನು ಎನ್’ಕೌಂಟರ್ ಮಾಡಿದ್ದಾರೆ. ಕಣಿವೆ ನಾಡಿನಲ್ಲಿ ನಾಗರಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿರುವ ಬೆನ್ನಲ್ಲೇ ಭಯೋತ್ಪಾದಕರ ನಿಗ್ರಹಕ್ಕೆ ಶೋಧ ಕಾರ್ಯಾಚರಣೆ ಹೆಚ್ಚಿಸಲಾಗಿದೆ.
ಜೂನ್ 30ರಿಂದ ಆರಂಭವಾಗಲಿರುವ ಅಮರನಾಥ ಯಾತ್ರೆಯನ್ನು ಗುರಿಯಾಗಿಸಿ ದಾಳಿ ನಡೆಸಲು ಈ ಉಗ್ರರು ಸಂಚು ರೂಪಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Also read: ಡಾಲಿ ಧನಂಜಯ ಅಭಿನಯದ ಹೆಡ್ ಬುಷ್ ಅ.21ರಂದು ಬೆಳ್ಳಿತೆರೆಗೆ
ಅಮರನಾಥ ಯಾತ್ರೆಯ ಮೇಲೆ ದಾಳಿ ನಡೆಸಲು ಮೂವರು ಉಗ್ರರು ಯೋಜನೆ ರೂಪಿಸಿದ್ದು, ಇದನ್ನು ಯೋಧರು ವಿಫಲಗೊಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post