ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಕಣಿವೆ ರಾಜ್ಯ ಜಮ್ಮು ಕಾಶ್ಮೀರದ #Jammu and Kashmir ಪಹಲ್ಗಾಮ್ #Pahalgam ಪ್ರದೇಶದಲ್ಲಿ ನಿನ್ನೆ 26 ಪ್ರವಾಸಿಗರನ್ನು ಬಳಿ ಪಡೆದ ಉಗ್ರಗಾಮಿಗಳಲ್ಲಿ ಮೂವರ ರೇಖಾ ಚಿತ್ರಗಳನ್ನು ಬಿಡುಗಡೆ ಮಾಮಾಡಿದ ಬೆನ್ನಲ್ಲೇ ಉಗ್ರರ ಮೊದಲ ಫೋಟೋ ಬಿಡುಗಡೆ ಮಾಡಲಾಗಿದೆ.
ಇಲ್ಲಿನ ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಿನ್ನೆ ದಾಳಿ #Terror Attack ನಡೆಸಿದ್ದರು. ಘಟನೆಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ #Manjunath ಸೇರಿ 26 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಪ್ರತ್ಯಕ್ಷ ದರ್ಶಿಗಳ ಹೇಳಿಕೆ ಹಾಗೂ ಮಾಹಿತಿ ಆಧಾರದಲ್ಲಿ ರೇಖಾಚಿತ್ರ ಬಿಡಿಸಿ, ಬಿಡುಗಡೆ ಮಾಡಲಾಗಿದೆ.
ಘಟನೆ ಹಿನ್ನೆಲೆಯಲ್ಲಿ ಕೆರಳಿರುವ ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನೆ, ಉಗ್ರರಿಗಾಗಿ ಹಲವು ತಂಡಗಳನ್ನು ಮಾಡಿಕೊಂಡು ಕೂಂಬಿಂಗ್ ಕಾರ್ಯಾಚರಣೆಯನ್ನು ನಿರಂತರವಾಗಿ ನಡೆಸುತ್ತಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ಉನ್ನತ ಮಟ್ಟದ ಸಭೆ ನಡೆಸಿದ್ದು, ಉಗ್ರರನ್ನು ಮಟ್ಟ ಹಾಕಲು ಸೂಚನೆ ನೀಡಿದ್ದಾರೆ.
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ದಾಳಿಯಲ್ಲಿ 28 ಜನರು ಸಾವನ್ನಪ್ಪಿದ್ದು, ಇಂದು ಅದೇ ರಾಜ್ಯದ ಬಾರಾಮುಲ್ಲಾದ ನಿಯಂತ್ರಣ ರೇಖೆಯನ್ನು ದಾಟಿ ಭಾರತದೊಳಗೆ ನುಸುಳಲು ಯತ್ನಿಸಿದ ಇಬ್ಬರು ಶಂಕಿತ ಉಗ್ರರನ್ನು ಸೇನೆ ಕೊಂದಿದೆ ಎಂದ ವರದಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post