ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಜಮ್ಮು ಕಾಶ್ಮೀರದ ಗಡಿಯಲ್ಲಿ Jammu and Kashmira Border ನಿನ್ನೆಯಿಂದ ಆರಂಭವಾಗಿರುವ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಕರ್ನಲ್, ಮೇಜರ್ ಸೇರಿ ನಾಲ್ವರು ಯೋಧರು ವೀರಸ್ವರ್ಗ ಸೇರಿದ್ದಾರೆ.
ಅನಂತನಾಗ್ ಜಿಲ್ಲೆಯಲ್ಲಿ ನಿನ್ನೆಯಿಂದ ಭಾರತೀಯ ಸೇನೆ Indian Army ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಅದು ಇಂದೂ ಸಹ ಮುಂದುವರೆದಿದ್ದು, ಈವರೆಗೂ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಉಗ್ರರು ಅಡಗಿರುವ ಅನಂತನಾಗ್’ನ ಕೋಕರ್ನಾಗ್ ಅರಣ್ಯ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿವೆ. ಭಯೋತ್ಪಾದಕರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
Also read: ಪತನದತ್ತ ಜೀವನ ಮೌಲ್ಯಗಳು: ಹಾರೋಹಳ್ಳಿ ಜಯರಾಂರವರು ವಿಷಾದ
ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಲ್ ಮನ್ವಿತ್ ಸಿಂಗ್, ಮೇಜರ್ ಆಶಿಶ್ ಮತ್ತು ಡಿಎಸ್ಪಿ ಹುಮಾಯೂನ್ ಭಟ್ ಸೇರಿದಂತೆ ಮೂವರು ಅಧಿಕಾರಿಗಳು ಸಾವನ್ನಪ್ಪಿದ್ದರು. ಇಂದು ಮೃತಪಟ್ಟ ನಾಲ್ಕನೆಯ ಯೋಧನ ಗುರುತು ಇನ್ನೂ ಬಹಿರಂಗವಾಗಿಲ್ಲ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post