ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಭಾರತದಲ್ಲಿ ವಿಧ್ವಂಸಕ ಕೃತ್ಯಕ್ಕೆ ಹೊಂಚು ಹಾಕಿದ್ದಾರೆ ಎಂದು ಹೇಳಲಾದ ನಾಲ್ವರು ಜೈಶ್ ಎ ಮೊಹಮದ್ ಸಂಘಟನೆಯ ನಾಲ್ವರು ಉಗ್ರರನ್ನು ಬಂಧಿಸುವಲ್ಲಿ ಸೇನೆ Indian Army ಯಶಸ್ವಿಯಾಗಿದೆ.
ಖಚಿತ ಮಾಹಿತಿ ಆಧರಿಸಿ ಶ್ರೀನಗರದ ಹೊರವಲಯದಲ್ಲಿರುವ ನೌಗಮ್ನ್ ಕೆನಿಹಮಾ ಪ್ರದೇಶದಲ್ಲಿ ಚೆಕ್ ಪೋಸ್ಟ್ ತೆರೆದು ಬಿಗಿ ತಪಾಸಣೆಯನ್ನು ಸೇನೆ ಆರಂಭಿಸಿತ್ತು.
ತಪಾಸಣೆಯ ಸಮಯದಲ್ಲಿ, ಭದ್ರತಾ ಪಡೆಗಳು ವಾಹನವನ್ನು ತಡೆದು ನಾಲ್ವರನ್ನು ಬಂಧಿಸಲಾಯಿತು ಎಂದು ಸೇನೆಯ ವಕ್ತಾರರು ತಿಳಿಸಿದ್ದಾರೆ.
Also read: ಮಾಧ್ಯಮ ಶಿಕ್ಷಣದ ಮರುವಿನ್ಯಾಸ ಅನಿವಾರ್ಯ: ಪ್ರೊ.ಬಿ.ಕೆ. ರವಿ ಅಭಿಮತ
ಬಂಧಿತ ಉಗ್ರರನ್ನು ಮೊಹಮ್ಮದ್ ಯಾಸೀನ್ ಭಟ್, ಶೆರಾಜ್ ಅಹ್ಮದ್ ರಾಥರ್, ಗುಲಾಮ್ ಹಸನ್ ಖಾಂಡೆ ಹಾಗೂ ಇಮ್ತಿಯಾಜ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ.
ಬಂಧಿತರು ಲಕ್ನಂಬಲ್ ಜಫ್ರಾನ್ ಕಾಲೋನಿ ಪಂಥಾ ಚೌಕ್ ಮತ್ತು ಫ್ರೆಸ್ಟಾಬಲ್ ಪಾಂಪೋನರ್ ನಿವಾಸಿಗಳು ಎನ್ನಲಾಗಿದೆ.
ಅಪಾರ ಶಸ್ತ್ರಾಸ್ತ್ರ ವಶ
ಉಗ್ರರಿಂದ ಮೂರು ಮ್ಯಾಗಜೀನ್’ಗಳು, ಎಕೆ 56 ರೈಫಲ್, 7.62, 39 ಎಂಎಂನ 75 ಸುತ್ತುಗಳು, ಎರಡು ಮ್ಯಾಗಜೀನ್’ಗಳಿರುವ ಗ್ಲೋಕ್ ಪಿಸ್ತೂಲ್, 9 ಎಂಎAನ 26 ಸುತ್ತುಗಳು ಮತ್ತು ಆರು ಚೈನೀಸ್ ಗ್ರೆನೇಡ್’ಗಳು ಸೇರಿದಂತೆ ಅಪಾರ ಶಸ್ತಾçಸ್ತçಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post