ಕಲ್ಪ ಮೀಡಿಯಾ ಹೌಸ್ | ಶೃಂಗೇರಿ |
ಶ್ರೀ ಶಾರದಾ ಪೀಠದ ಜಗದ್ಗುರುಗಳಿಗೆ ಅವಮಾನ ಮಾಡಿದ ಮುನ್ನಾ ಅಜರ್ ಎಂಬಾತನಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಶೃಂಗೇರಿ ನ್ಯಾಯಾಲಯ ಆದೇಶಿಸಿದೆ.
ಕರ್ನಾಟಕ ಹಿಂದೂಸ್ ಎಂಬ ಫೇಸ್’ಬುಕ್ ಪೇಜಿನಲ್ಲಿ ಗುರು ಗುರುಪರಂಪರೆಯ ಫೋಟೋ ಹಾಕಲಾಗಿತ್ತು. ಇದಕ್ಕೆ 2015ರ ನವೆಂಬರ್ 15ರಂದು ಹುಬ್ಬಳ್ಳಿ ಮೂಲದ ಮುನ್ನಾ ಅಜರ್ ಎಂಬಾತ ಶೃಂಗೇರಿ ಶ್ರೀಗಳ ವಿರುದ್ಧ ಅವಹೇಳನಕಾರಿಯಾಗಿ ಫೇಸ್’ಬುಕ್’ನಲ್ಲಿ ಪೋಸ್ಟ್ ಹಾಕಿದ್ದ.

ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಮೂಲದ ಮುನ್ನಾ ಅಜರ್ ಎಂಬಾತನನ್ನು ಬಂಧಿಸಲಾಗಿತ್ತು. ಈಗ ಪ್ರಕರಣಕ್ಕೆ ಸಂಬAಧಿಸಿದAತೆ ಆತನಿಗೆ ಮೂರು ವರ್ಷ ಜೈಲು ಶಿಕ್ಷೆಯನ್ನು ನ್ಯಾಯಲಯ ವಿಧಿಸಿದೆ.










Discussion about this post