ಕಲ್ಪ ಮೀಡಿಯಾ ಹೌಸ್ | ಶೃಂಗೇರಿ |
ದೇಶದ ಪ್ರಥಮ ಪ್ರಜೆ, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶೃಂಗೇರಿ ಮಠಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಅ.7-8ರಂದು ಶ್ರೀಮಠದಲ್ಲಿ ಭಕ್ತರಿಗೆ ಕೆಲವೊಂದು ನಿಬಂಧನೆಗಳನ್ನು ವಿಧಿಸಲಾಗಿದೆ.
ಈ ಕುರಿತಂತೆ ಶ್ರೀಮಠದ ಆಡಳಿತಾಧಿಕಾರಿ ವಿ.ಆರ್. ಗೌರಿಶಂಕರ್ ಅವರು ಪ್ರಕಟಣೆ ಹೊರಡಿಸಿದ್ದು, ರಾಷ್ಟ್ರಪತಿಗಳು ಶ್ರೀ ಶಾರದಮ್ಮನವರ ಹಾಗೂ ಉಭಯ ಜಗದ್ಗುರುಗಳ ದರ್ಶನಕ್ಕಾಗಿ ಶೃಂಗೇರಿ ಶಾರದಾ ಪೀಠಕ್ಕೆ ಅ.8ರಂದು ಬೆಳಗ್ಗೆ 11.30ರಿಂದ 4 ಗಂಟೆಯವರೆಗೂ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳ ರಕ್ಷಣಾ ದೃಷ್ಠಿಯಿಂದ ಅ.7 ಹಾಗೂ 8ರಂದು ಶ್ರೀಮಠದ ಆವರಣದಲ್ಲಿ ಹಲವಾರು ನಿಬಂಧನೆಗಳನ್ನು ವಿಧಿಸಲಾಗಿದ್ದು, ಭಕ್ತಾದಿಗಳು ಸಹಕರಿಸಬೇಕಾಗಿ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post