ಕಲ್ಪ ಮೀಡಿಯಾ ಹೌಸ್ | ಶೃಂಗೇರಿ |
ಶೃಂಗೇರಿ ಶಾರದಾಪೀಠಕ್ಕೆ Shringeri Sharadha Peeta ನೂತನ ಆಡಳಿತಾಧಿಕಾರಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು, ಪಿ.ಎ ಮುರಳಿ P A Murali ಅವರನ್ನು ಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.ಈ
ಬಗ್ಗೆ ಶ್ರೀಮಠ ಪ್ರಕಟಣೆ ಹೊರಡಿಸಿದ್ದು, ಜ.25ರಿಂದ ಜಾರಿಗೆ ಬರುವಂತೆ ಪಿ.ಎ ಮುರಳಿ ಅವರನ್ನು ಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಆಡಳಿತಾಧಿಕಾರಿಯನ್ನಾಗಿ ಜಗದ್ಗುರು ಭಾರತೀ ತೀರ್ಥ ಸ್ವಾಮಿಗಳು ನೇಮಕ ಮಾಡಿದ್ದಾರೆಂದು ತಿಳಿಸಲಾಗಿದೆ.

Also read: ಅರಣ್ಯ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು: ವಕೀಲ ಎಂ.ಆರ್. ಪಾಟೀಲ್ ಕರೆ
ಕಿರಿಯ ಶ್ರೀಗಳಾದ ವಿಧುಶೇಖರ ಭಾರತೀ ಸ್ವಾಮಿಗಳು ಸನ್ಯಾಸ ಸ್ವೀಕರಿಸಿ 9 ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಗೌರಿ ಶಂಕರ್ ಅವರು ಮಠದ ಆಡಳಿತಾಧಿಕಾರಿಗಳಿಗೆ ಮುಖ್ಯ ಸಲಹೆಗಾರರಾಗಿ ಮುಂದುವರೆಯಲಿದ್ದಾರೆ ಎಂದು ಶ್ರೀಮಠ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post