ಕಲ್ಪ ಮೀಡಿಯಾ ಹೌಸ್ | ಶೃಂಗೇರಿ |
ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ Shringeri Shri Sharadhapeeta ಅಕ್ಟೋಬರ್ 15 ರಿಂದ 25ರವರೆಗೆ ಶ್ರೀ ಶರನ್ನವರಾತ್ರಿ Sharannavarathri ಮಹೋತ್ಸವ ನಡೆಯಲಿದ್ದು, 14ರಿಂದಲೇ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ.
14ರಂದು ಭಾದ್ರಪದ ಅಮಾವಾಸ್ಯೆ ದಿನ ಜಗನ್ಮಾತೆಗೆ ಮಹಾಭಿಷೇಕ ನೆರವೇರಲಿದೆ. ಬಳಿಕ ಶ್ರೀ ಶಾರದೆಗೆ ಆನೇಕ ವಿಧವಾದ ಫಲ-ಪಂಚಾಮೃತ ಅಭಿಷೇಕ, ಮಹಾನ್ಯಾಸಪೂರ್ವಕ ಶತರುದ್ರಾಭಿಷೇಕ ಹಾಗೂ 108 ಸಲ ಶ್ರೀಸೂಕ್ತ ಪಠನದಿಂದ ಅಭಿಷೇಕ ನೆರವೇರಲಿದೆ. ಅಂದು ಶ್ರೀ ಶಾರದೆ ಜಗತ್ಪ್ರಸೂತಿಕಾ ಅಲಂಕಾರದಲ್ಲಿ ಕಂಗೊಳಿಸಲಿದ್ದಾಳೆ.

- 15 ರಂದು ಶ್ರೀ ಶಾರದಾ ಪ್ರತಿಷ್ಠೆ, ಬ್ರಾಹ್ಮೀ ಅಲಂಕಾರ
- 16- ಹಂಸವಾಹಿನಿ
- 17- ಮಾಹೇಶ್ವರಿ
- 18- ಮಯೂರವಾಹನಾ ಅಲಂಕಾರ
- 19- ವೈಷ್ಣವೀ ಅಲಂಕಾರ, ಶತಚಂಡೀಯಾಗದ ಪ್ರಯುಕ್ತ ಶಾಲಾ ಪ್ರವೇಶ, ಪುರಶ್ಚರಣಾರಂಭ
- 20- ಸರಸ್ವತ್ಯಾವಾಹನೆ, ವೀಣಾಶಾರದಾಲಂಕಾರ
- 21- ಮೋಹಿನಿ ಅಲಂಕಾರ
- 22- ರಾಜರಾಜೇಶ್ವರಿ ಅಲಂಕಾರ
- 23- ಮಹಾನವಮಿ, ಸಿಂಹವಾಹನಾಲಂಕಾರ, ಶತಚಂಡಿಯಾಗದ ಪೂರ್ಣಾಹುತಿ, ಗಜಾಶ್ವಪೂಜೆ, ಸಂಜೆ ವಿಜಯೋತ್ಸವ, ಶಮೀಪೂಜೆ
- 24- ವಿಜಯದಶಮಿ, ಗಜಲಕ್ಷ್ಮಿ ಅಲಂಕಾರ, ಲಕ್ಷ್ಮೀನಾರಾಯಣ ಹೃದಯಹೋಮ, ರಾಮಪಟ್ಟಾಭಿಷೇಕ ಸರ್ಗ ಪಾರಾಯಣಿ
- 25- ಗಜಲಕ್ಷ್ಮೀ ಅಲಂಕಾರ, ಶೀ ಶಾರದಾಂಬಾ ಮಹಾರಥೋತ್ಸವ, ಶ್ರೀ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿದೆ.
Also read: Shah emphasizes uprooting terrorism by targeting its ecosystem

ನವರಾತ್ರಿ ಸಂದರ್ಭದಲ್ಲಿ ಶ್ರೀ ಮಠದಲ್ಲಿ ನಾಲ್ಕು ವೇದಗಳ ಪಾರಾಯಣ, ವಾಲ್ಮೀಕಿ ರಾಮಾಯಣ, ದೇವಿ ಭಾಗವತ, ದುರ್ಗಾ ಸಪ್ತಶತಿ, ವಾಲ್ಮೀಕಿ ರಾಮಾಯಣ, ಶ್ರೀ ಸೂಕ್ತ ಜಪ, ಭವನೇಶ್ವರಿ ಜಪ, ಶ್ರೀ ಚಂದ್ರಮೌಳೀಶ್ವರ ಸ್ವಾಮಿಗೆ ಶತರುದ್ರಾಭಿಷೇಕ, ಶ್ರೀ ಚಕ್ರಕ್ಕೆ ನವಾಹರಣ ಪೂಜೆ, ಕುಮಾರೀ, ಸುವಾಸಿನೀ ಪೂಜೆ ನಡೆಯಲಿದೆ.
ನವರಾತ್ರಿ ಉತ್ಸವದ ಸಲುವಾಗಿ ರಾಜಬೀದಿಯಲ್ಲಿ ನಡೆಯುವ ರಥೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಜಗದ್ಗುರುಗಳು ಶ್ರೀಮಠದ ಸಂಪ್ರದಾಯಕ್ಕೆ ಅನುಸಾರವಾಗಿ ಕಿರೀಟ, ಆಭರಣಗಳನ್ನು ಧರಿಸಿ, ಸ್ವರ್ಣ ಸಿಂಹಾಸನದಲ್ಲಿ ಅಸೀನರಾಗಿ ದರ್ಬಾರ್ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ಶ್ರೀಮಠದ ಆವರಣದಲ್ಲಿ ದೇಶ-ವಿಖ್ಯಾತ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ.










Discussion about this post