ಕಲ್ಪ ಮೀಡಿಯಾ ಹೌಸ್ | ಶ್ರೀರಂಗಪಟ್ಟಣ |
ನಿಮಿಷಾಂಬ ದೇವಾಲಯದಲ್ಲಿ ಫೆಬ್ರವರಿ 23 ಮತ್ತು 24 ರಂದು ಮಾಘ ಶುದ್ಧ ಹುಣ್ಣಿಮೆಯು ಜರುಗಲಿದೆ. ಈ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕುಮಾರ್‌ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶ್ರೀ ಶ್ರೀರಂಗಪಟ್ಟಣದ ಗಂಜಾಂನ ಶ್ರೀ ನಿಮಿಷಾಂಬ ದೇವಾಲಯದಲ್ಲಿ 2024ನೇ ಸಾಲಿನ ಮಾಘಶುದ್ಧ ಪೌರ್ಣಮಿ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Also read: ಹೆಚ್ಚುತ್ತಿರುವ ವಿವಾಹ ವಿಚ್ಛೇದನ | ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆ ಉಲ್ಲೇಖಿಸಿದ ಕಾರಣಗಳು
ಸಭೆಯಲ್ಲಿ ನಗರಾಭಿವೃದ್ಧಿ ಕೋಶಾಧಿಕಾರಿ ತುಷಾರಮಣಿ, ಕೆಎಸ್’ಆರ್’ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ಮುಜರಾಯಿ ತಹಶಿಲ್ದಾರ್ ತಮ್ಮೇಗೌಡ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕೆ. ಮೋಹನ್, ನಿಮಿಷಾಂಬ ದೇವಾಲಯದ ಇಓ ಸಿ.ಜಿ. ಕೃಷ್ಣ, ಪ್ರಧಾನ ಅರ್ಚಕ ಸೂರ್ಯನಾರಾಯಣ ಭಟ್, ಶ್ರೀರಂಗಪಟ್ಟಣದ ತಹಶೀಲ್ದಾರ್ ಪರಶುರಾಮ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post