ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಸಾಗರ ರಸ್ತೆ ಹೆದ್ದಾರಿಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಡಕು ಉಂಟಾಗಿದೆ.
ಪಿಇಎಸ್ ಕಾಲೇಜು ಎದುರು ಭಾಗದ ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ನಿಂತಿದೆ. ಸುಮಾರು ೨ ಅಡಿಗಳಷ್ಟು ನೀರು ರಸ್ತೆಯಲ್ಲಿ ಹರಿಯುತ್ತಿದೆ ಎಂದು ವರದಿಯಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಭಾರೀ ಪ್ರಮಾಣದಲ್ಲಿ ನೀರು ನಿಂತಿರುವ ಪರಿಣಾಮ ಬೈಕ್ ಹಾಗೂ ಕಾರುಗಳು ಸಂಚರಿಸಲು ಅಡ್ಡಿಯುಂಟಾದ ಪರಿಣಾಮ ಹೆದ್ದಾರಿಯಲ್ಲಿ ವಾಹನಗಳು ಸಾಲು ಗಟ್ಟಿನಿಂತಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post