ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಜಮೀನು ವಿವಾದದ ಹಿನ್ನೆಲೆಯಲ್ಲಿ ಸರ್ವೆ ಅಧಿಕಾರಿ ಗಳೊಂದಿಗೆ ಜಮೀನ ಸರ್ವೆ ಮಾಡಲು ಹೋಗಿದ್ದ ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಅಮಾನುಷವಾಗಿ ಹತ್ಯೆ ಮಾಡಿರುವುದನ್ನು ಸರ್ಕಾರಿ ನೌಕರರ ಸಂಘ ಉಗ್ರವಾಗಿ ಖಂಡಿಸಿದೆ.
ಬಂಗಾರಪೇಟೆ ತಹಶೀಲ್ದಾರ್ ಅವರ ಹತ್ಯೆ ಖಂಡಿಸಿ, ಸರ್ಕಾರಿ ನೌಕರರ ಸಂಘದಿಂದ ನಡೆಸಿದ ಮೌನ ಪ್ರತಿಭಟನೆಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಜಿ.ಟಿ. ಜಗನ್ನಾಥ್, ಈ ಕೂಡಲೇ ಸರ್ಕಾರ ಮೃತ ತಹಶೀಲ್ದಾರ್ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು. ಅಲ್ಲದೆ ಅವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂಬುದಾಗಿ ರಾಜ್ಯದ ಮುಖ್ಯಮಂತ್ರಿಗಳನ್ನು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿಯ ಚಿಕ್ಕಕಳವಂಚಿ ಗಡಿ ಗ್ರಾಮದಲ್ಲಿ ಹಾಡುಹಗಲೇ ಈ ಅಮಾನುಷ ಕೃತ್ಯ ನಡೆದಿದ್ದು, ಹೀಗಾದರೆ ಸರ್ಕಾರಿ ನೌಕರರು ದಕ್ಷತೆಯಿಂದ ಕೆಲಸ ನಿರ್ವಹಿಸುವುದು ಕಷ್ಟವಾಗುತ್ತದೆ. ಈ ಕೂಡಲೇ ಸರ್ಕಾರ ಕೊಲೆಗೀಡಾದ ತಹಶೀಲ್ದಾರ್ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು. ಅಲ್ಲದೆ, ಸರ್ಕಾರಿ ನೌಕರರು ನಿರ್ಭೀತಿಯಿಂದ ಕೆಲಸ ನಿರ್ವಹಿಸಲು ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು ಎಂಬುದಾಗಿ ಸರ್ಕಾರವನ್ನು ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ಎಸ್.ಬಿ. ತಿಪ್ಪೇಸ್ವಾಮಿ, ಸಂಘದ ಪದಾದಿಕಾರಿಗಳಾದ ಲಿಂಗೇಗೌಡ, ಸಿ.ಟಿ. ವೀರೇಶ್, ಸಣ್ಣಸೂರಮ್ಮ, ಮರುತೇಶ, ದಯಾನಂದ, ವಿ. ತಿಪ್ಪೇಸ್ವಾಮಿ, ಇಂದಿರಾ, ಸುರೇಶ್ ಬಾಬು, ಚಂದ್ರಣ್ಣ, ರಂಗಪ್ಪ, ಡಿ.ಟಿ. ಹನುಮಂತಪ್ಪ, ಬಸವರಾಜ್, ವೆಂಕಟಲಕ್ಷ್ಮೀ, ಭೀಮಣ್ಣ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
Get In Touch With Us info@kalpa.news Whatsapp: 9481252093
Discussion about this post