ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸರ್ ಎಂ ವಿಶ್ವೇಶ್ವರಯ್ಯ ಅವರ ಜೀವನ, ಸಾಧನೆ ಹಾಗೂ ಅವರ ಅಪ್ರತಿಮೆ ಇಂಜಿನಿಯರಿಂಗ್ ಕೊಡುಗೆಗಳು ಅವಿಸ್ಮರಣೀಯ ಎಂದು ಶಿವಮೊಗ್ಗದ ತುಂಗಾ ಮೇಲ್ದಂಡೆ ಯೋಜನೆಯ ಕಾರ್ಯನಿರ್ವಾಹಕ ಇಂಜಿನಿಯರ್ ಕೃಷ್ಣಪ್ರಸಾದ್ ಹೇಳಿದರು.
PES ಟ್ರಸ್ಟ್‌ನ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ PES ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ವತಿಯಿಂದ ಭಾರತದ ಶ್ರೇಷ್ಠ ಇಂಜಿನೀಯರ್ ಹಾಗೂ ದೂರದೃಷ್ಟಿಯುಳ್ಳ ಮಹಾನ್ ವ್ಯಕ್ತಿ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಇಂಜಿನೀಯರ್ಸ್ ಡೇ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.
ಸರ್ ಎಂ ವಿಶ್ವೇಶ್ವರಯ್ಯ ಅವರು ತಮ್ಮ ಜೀವನದಲ್ಲಿ ಕೈಗೊಂಡ ಹಲವು ಮಹತ್ವದ ಹಾಗೂ ಸವಾಲಿನ ಯೋಜನೆಗಳ ಹಿಂದೆ ಇದ್ದ ಪ್ರೇರಣಾದಾಯಕ ಘಟನೆಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.
Also read>> ಮೂಕಾಂಬಿಕಾ ಸಮೃದ್ಧಿ ಬಡಾವಣೆಯಲ್ಲಿ ಗಣೇಶೋತ್ಸವ: ಮಕ್ಕಳಿಗೆ ವಿವಿಧ ಕ್ರೀಡಾಕೂಟ ಸಂಪನ್ನ
PES ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ ಪ್ರಾಂಶುಪಾಲರಾದ ಡಾ. ಸ್ವಾಮಿ ಡಿ ಆರ್ ಅವರು ತಮ್ಮ ಅಧ್ಯಕ್ಷೀಯ ಮಾತುಗಳಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಅಪಾರ ಜ್ಞಾನ, ಶಿಸ್ತು, ಸಮರ್ಪಣೆ ಹಾಗೂ ದೂರದೃಷ್ಟಿಯ ಗುಣಗಳನ್ನು ಸ್ಮರಿಸಿದರು. ಅವರಲ್ಲಿದ್ದ ಈ ಆದರ್ಶ ಮೌಲ್ಯಗಳನ್ನು ಇಂದಿನ ಯುವ ಪೀಳಿಗೆ ಅಳವಡಿಸಿಕೊಂಡು, ಅವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.
ಕಾರ್ಯಕ್ರಮದ ಅಂತ್ಯದಲ್ಲಿ ಮುಖ್ಯ ಅತಿಥಿಗಳಾದ ಕೃಷ್ಣಪ್ರಸಾದ್ ಎಚ್ ಜಿ ಅವರನ್ನು ಅವರ ಅಮೂಲ್ಯ ಉಪಸ್ಥಿತಿ ಹಾಗೂ ಪ್ರೇರಣಾದಾಯಕ ಮಾತುಗಳಿಗೆ ಕೃತಜ್ಞತೆಯ ಸಂಕೇತವಾಗಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಇಂಜಿನೀಯರಿಂಗ್ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







