ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹತ್ವದ ಬೆಳವಣಿಗೆಯಲ್ಲಿ ಇಂದು ರಾಜ್ಯ ಸರ್ಕಾರ ರಚಿಸಿರುವ SIT ತನಿಖೆ ವ್ಯಾಪ್ತಿಗೆ ಸೌಜನ್ಯ ಪ್ರಕರಣ ಇಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಸ್ಪಷ್ಟನೆ ನೀಡಿರುವ ಅವರು, ಈಗ ರಚಿಸಲಾಗಿರುವ SIT, ಸರಣಿ ಅಸಹಜ ಸಾವಿನ ಶವ ಹೂತಿಟ್ಟ ಪ್ರಕರಣವನ್ನು ಮಾತ್ರ ತನಿಖೆ ನಡೆಸಲಿದೆ ಎಂದಿದ್ದಾರೆ.


ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ಸರಣಿ ಹತ್ಯೆ ಹಾಗೂ ಶವಗಳ ಸಂಸ್ಕಾರ ಆರೋಪದ ತನಿಖೆ ನಡೆಸಲು SIT ರಚನೆ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಎಸ್‌ಐಟಿಯ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿಕೊಂಡಿದ್ದಾರೆ. SIT ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ. ಅಗತ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒದಗಿಸಲಾಗುತ್ತದೆ ಎಂದು ಆದೇಶದಲ್ಲಿ ಸೇರಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post