ಗದಗ: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಅಡವಿಸೋಮಾಪೂರ ಬಳಿ ಈ ಭೀಕರ ಅಪಘಾತ ನಡೆದಿದ್ದು, ಮದುವೆಗೆ ತೆರಳುತ್ತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.
ಪರಿಣಾಮವಾಗಿ ಆರು ಮಂದಿ ಸ್ಥಳದಲ್ಲಿಯೇ ಮೃತರಾಗಿದ್ದು, ತೀವ್ರವಾಗಿ ಗಾಯಗೊಂಡರವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ವೇಗವಾಗಿದ್ದ ಕಾರಣ ನಿಯಂತ್ರಣ ತಪ್ಪಿ, ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಕರಣ ದಾಖಲಾಗಿದೆ.
Discussion about this post