ಕಲ್ಪ ಮೀಡಿಯಾ ಹೌಸ್ | ತಿರುವನಂತಪುರಂ |
ಕಳೆದ 20 ವರ್ಷಗಳಿಂದ ಪಾಳು ಬಿದ್ದಿದ್ದ ಮನೆಯೊಂದರಲ್ಲಿ ಫ್ರಿಡ್ಜ್ ‘ನಲ್ಲಿ #Fridge ಮಾನವನ ತಲೆಬುರುಡೆ ಹಾಗೂ ಅಸ್ಥಿ ಪಂಚರ #Skeleton ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿರುವ ಘಟನೆ ತಿರುವನಂತಪುರಂ ಬಳಿಯಲ್ಲಿ ನಡೆದಿದೆ.
ಇಲ್ಲಿನ ಚೊಟ್ಟನಿಕ್ಕಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ಕಂಡು ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ.
Also Read>> ಶಿವಮೊಗ್ಗ | ತ್ಯಾವರೆಕೊಪ್ಪ ಸಫಾರಿಯ ಹುಲಿ ಅಂಜನಿ ಸಾವು
ಎರುವೇಲಿ ಪೂರ್ವದ ಚೊಟ್ಟಣಿಕ್ಕರ ಅರಮನೆ ಚೌಕದಲ್ಲಿರುವ 12 ಎಕರೆ ಜಾಗದಲ್ಲಿ ಪಾಳು ಬಿದ್ದ ಮನೆಯಿದೆ. ಈ ಆಸ್ತಿ ವೈದ್ಯ ಮಂಗಳಶ್ಶೇರಿ ಫಿಲಿಪ್ ಜಾನ್ ಅವರಿಗೆ ಸೇರಿದ್ದಾಗಿದೆ ಎಂದು ಹೇಳಲಾಗಿದೆ.
ವಿಚಿತ್ರ ಎಂದರೆ ಕಳೆದ 20 ವರ್ಷಗಳಿಂದ ಮನೆಯಲ್ಲಿ ಯಾರೂ ವಾಸವಿರಲಿಲ್ಲ. ಆದರೂ ಮನೆಗೆ ಮೂಳೆಗಳು ಹೇಗೆ ಬಂದಿವೆ? ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.
ಪೊಲೀಸರು ಹಾಗೂ ವಿಧಿವಿಜ್ಞಾನ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಲೆಬುರುಡೆ ಹಾಗೂ ಅಸ್ಥಿ ಪಂಜರದ ಭಾಗಗಳನ್ನು ಪರೀಕ್ಷಿಸಿ, ಮರಣೋತ್ತರ ಪರೀಕ್ಷೆಗೆ ಒಳಪಡಿಸಿದೆ.
Also Read>> ಜೆಎನ್‌ಎನ್‌ಸಿಇ | ಜ.10ರಿಂದ ಎರಡು ದಿನಗಳ ಅಂತರಾಷ್ಟ್ರೀಯ ವಿಚಾರ ಸಂಕಿರಣ
ಅಲ್ಲದೇ, ಇವುಗಳ ಕುರಿತಾಗಿ ಹೆಚ್ಚಿನ ಮಾಹಿತಿ ಪಡೆಯಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಫೋರೆನ್ಸಿಕ್ #Forensic ವಿಶ್ಲೇಷಣೆಯ ಮೂಲಕ ನಿಖರವಾದ ವಯಸ್ಸನ್ನು ಪರಿಶೀಲಿಸಬೇಕಾಗಿದೆ ಎಂದು ತಿಳಿದುಬಂದಿದೆ.
ಇನ್ನು, ಅಸ್ಥಿಪಂಜರ, ತಲೆಬುರುಡೆ #Skull ಮಹಿಳೆಯರದ್ದು, ಆದರೆ ಅವುಗಳು ಒಬ್ಬರದ್ದಲ್ಲ. ಅವುಗಳ ವಯಸ್ಸು ಮತ್ತು ಮೂಲವನ್ನು ಪತ್ತೆ ಹಚ್ಚುವುದು ಕಠಿಣವಾದರೂ ಈ ಬಗ್ಗೆ ಕೂಡ ಪರಿಶೀಲಿಸಲಾಗುವುದು ಎಂದು ವರದಿಯಾಗಿದೆ.
ಪೊಲೀಸರು ಸಂಬಂಧಿತ ಮನೆಯ ಮಾಲೀಕರು, ವೈದ್ಯರು ಮತ್ತು ನೆರೆಹೊರೆಯವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post