ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೈಯಲ್ಲೇ ಡೆತ್ ನೋಟ್ #DeathNote ಹಿಡಿದುಕೊಂಡು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ #KarnatakaSoapandDetergentCorporation ಅಧಿಕಾರಿಯೊಬ್ಬರಿ ಆತ್ಮಹತ್ಯೆಗೆ #Suicide ಶರಣಾಗಿರುವ ಘಟನೆ ನಡೆದಿದೆ.
ಮೃತ ಅಧಿಕಾರಿಯಲ್ಲಿ ಅಮೃತ್ ಸಿರಿಯೂರ್ ಎಂದು ಗುರುತಿಸಲಾಗಿದೆ.
Also Read>> ಶಿವಮೊಗ್ಗ | ನ್ಯೂ ಇಯರ್ ವೆಲ್ ಕಂ ಗೆ ಕೌಂಟ್ ಡೌನ್ ಶುರು, ಜನ ಫುಲ್ ಜಾಲಿ ಜಾಲಿ!
ಕೈಯಲ್ಲಿ ಡೆತ್ ನೋಟ್ ಹಿಡಿದುಕೊಂಡು ಅಮೃತ್ ಸಿರಿಯೂರ್ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಅಮೃತ್ ಅವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದು ಇಂದು ಪ್ರಕರಣ ಬೆಳಕಿಗೆ ಬಂದಿದೆ.
ಕೆಎಸ್ಡಿಎಲ್ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಮೃತ್ ಸಿರಿಯೂರ್ ಡೆತ್ ನೋಟ್’ನಲ್ಲಿ ಹಿರಿಯ ಅಧಿಕಾರಿಗಳ ಹೆಸರನ್ನು ಉಲ್ಲೇಖ ಮಾಡಿದ್ದಾರೆ ಎಂದು ಹೇಳಲಾಗಿದ್ದರೂ, ಅಧಿಕೃತ ಮಾಹಿತಿ ಪೊಲೀಸ್ ಅಧಿಕಾರಿಗಳಿಂದ ಪ್ರಕಟಗೊಂಡಿಲ್ಲ.
ಕೆಲಸದ ಸಂಬಂಧ ಒತ್ತಡ ಹಾಗೂ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್ ನೋಟ್’ನಲ್ಲಿ ಆರೋಪಿಸಿದ್ದಾರೆ ಎಂದು ಹೇಳಲಾಗಿದ್ದು, ಪೊಲೀಸ್ ಅಧಿಕಾರಿಗಳಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.
ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post