ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿಂದೂ ಕಾರ್ಯಕರ್ತನ ಭೀಕರ ಹತ್ಯೆ ಹಿನ್ನೆಲೆಯಲ್ಲಿ ಹಳೇ ಶಿವಮೊಗ್ಗ ಭಾಗದ ರವಿವರ್ಮ ಬೀದಿ, ಸೀಗೆಹಟ್ಟಿ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಪರಿಸ್ಥಿತಿ ಪ್ರಕ್ಷುಬ್ದಗೊಂಡಿದ್ದು, ನಿಯಂತ್ರಣಕ್ಕೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ವರದಿಯಾಗಿದೆ.
Also Read: ಶಿವಮೊಗ್ಗದಲ್ಲಿ ಮತ್ತೊಂದು ಭೀಕರ ಕೊಲೆ: ಹಳೇ ದ್ವೇಷ ಕಾರಣ?
ಹರ್ಷ ಎಂಬ ಯುವಕನ ಹತ್ಯೆ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಕಾದಾಟ ನಡೆದಿದೆ ಎಂದು ಹೇಳಲಾಗಿದ್ದರೂ, ಕಲ್ಲು ತೂರಾಟವಂತೂ ನಡೆದಿದೆ. ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಲಘು ಲಾಠಿ ಪ್ರಹಾರ ನಡೆಸಿದ್ದು, ಸ್ವತಃ ಜಿಲ್ಲಾ ರಕ್ಷಣಾಧಿಕಾರಿಗಳೇ ಕಾರ್ಯಾಚರಣೆಗೆ ಇಳಿದಿದ್ದರು.

ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿದ್ದು, ಹತ್ಯೆ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಹತ್ಯೆ ನಡೆಸಿರುವ ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಮಾಡುವಂತೆ ಆಗ್ರಹಿಸಿದ್ದಾರೆ.
ಇಂತಹ ಕೃತ್ಯಕ್ಕೆ ಕಾರಣರಾದವರನ್ನು ಆದಷ್ಟು ಶೀಘ್ರ ಪತ್ತೆ ಮಾಡಿ, ಕಾನೂನಾತ್ಮಕ ಕ್ರಮಕೈಗೊಳ್ಳುತ್ತೇವೆ. ದಯವಿಟ್ಟು ಪರಿಸ್ಥಿತಿ ನಿಯಂತ್ರಣಕ್ಕೆ ಸಹಕರಿಸಿ ಎಂದು ಸ್ವತಃ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post