ಕಲ್ಪ ಮೀಡಿಯಾ ಹೌಸ್ | ಸೊರಬ |
ಶಾಲೆಗೆ ತೆರಳಲು ಸಿದ್ಧನಾಗುತ್ತಿದ್ದ 10ನೆಯ ತರಗತಿ ಬಾಲಕನೊಬ್ಬ ಹೃದಯಾಘಾತದಿಂದಾಗಿ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ.
ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದ್ದು, ಜಯಂತ್ ಎಂಬ ಬಾಲಕನೇ ಮೃತ ದುರ್ದೈವಿ.
ಇಂದು ಮುಂಜಾನೆ ಶಾಲೆಗೆ ಹೋಗಲು ಸಿದ್ಧತೆ ತಯಾರಾಗುತ್ತಿದ್ದ ವೇಳೆ ಬಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ತತಕ್ಷಣ ಆತನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೆ ಅಷ್ಟೊತ್ತಿಗಾಗಲೇ ವಿದ್ಯಾರ್ಥಿ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ಓದುವುದರಲ್ಲಿ ಮುಂದಿದ್ದ ಬಾಲಕ, ದೈಹಿಕ ಚಟುವಟಿಕೆಗಳಲ್ಲೂ ಸಹ ನಿಪುಣನಾಗಿದ್ದ. ಆರೋಗ್ಯವಾಗಿದ್ದ ಈಗ ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ ಮೃತನಾಗಿರುವುದು ದುರಂತವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post