No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ: ಅವ್ಯವಸ್ಥೆಯ ಆಗರವಾದ ತಾಲೂಕು ಮಟ್ಟದ ದಸರಾ ಆಯ್ಕೆ ಕ್ರೀಡಾಕೂಟ

ಕನಿಷ್ಟ ವ್ಯವಸ್ಥೆಗಳಿಲ್ಲದೆ ಪರದಾಡಿದ ಕ್ರೀಡಾಪಟುಗಳು | ಕುಡಿಯುವ ನೀರಿನ ವ್ಯವಸ್ಥೆಯನ್ನೂ ಕಲ್ಪಿಸದ ಆಯೋಜಕರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 4, 2023
in ಸೊರಬ
0
ಸೊರಬ: ಅವ್ಯವಸ್ಥೆಯ ಆಗರವಾದ ತಾಲೂಕು ಮಟ್ಟದ ದಸರಾ ಆಯ್ಕೆ ಕ್ರೀಡಾಕೂಟ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಪಟ್ಟಣದ ಎಸ್. ಬಂಗಾರಪ್ಪ ಕ್ರೀಡಾಂಗಣದಲ್ಲಿ ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ ತಾಲೂಕು ಮಟ್ಟದ ದಸರಾ ಆಯ್ಕೆಯ ಕ್ರೀಡಾಕೂಟ Dasara Sports Event ಅವ್ಯವಸ್ಥೆಯ ಆಗರವಾಗಿತ್ತು.

ಸ್ವಚ್ಛತೆಯ ಕೊರತೆ, ಕುಡಿಯುವ ನೀರಿಗೆ ಪರದಾಟ, ವಿದ್ಯಾರ್ಥಿನಿಯರಿಗೆ ಬಟ್ಟೆ ಬದಲಿಸಲು ಸಹ ಕೊಠಡಿ ಇರದೇ ಮುಜುಗರ ಅನುಭವಿಸುವ ಸ್ಥಿತಿ, ಪ್ರಥಮ ಚಿಕಿತ್ಸೆಯ ಸೌಲಭ್ಯವೂ ಇರಲಿಲ್ಲ. ಇನ್ನೂ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳು ಅಂಕಣಕ್ಕೆ ಇಳಿಯಲು ಸಹ ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗಿತ್ತು. ತಾಲೂಕಿನ ವಿವಿಧ ಭಾಗಗಳಿಂದ 500ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳೇ ಪಾಲ್ಗೊಂಡಿರುವುದು ಕಂಡು ಬಂದಿತು.

ಕ್ರೀಡಾಂಗಣದಲ್ಲಿ ಯಾವುದೇ ಸೌಲಭ್ಯಗಳಿಲ್ಲ. ಕ್ರೀಡಾಂಗಣದಲ್ಲಿ ತೆಗ್ಗು ಉಬ್ಬುಗಳಿದ್ದು ಉತ್ತಮ ಪ್ರದರ್ಶನ ತೋರಲು ಸಾಧ್ಯವಾಗುತ್ತಿಲ್ಲ. ಅನೇಕ ಕ್ರೀಡಾಪಟುಗಳು ಗಾಯಗೊಂಡಿದ್ದಾರೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಕ್ರೀಡಾಂಗಣ ಜಾನುವಾರುಗಳನ್ನು ಮೇಯಿಸುವ ಮೈದಾನದಂತಿದೆ. ಯಾವುದೇ ಕ್ರೀಡಾಂಗಣದ ಅಂಕಣಗಳು ಸಮರ್ಪಕವಾಗಿಲ್ಲ. ಉತ್ತಮ ಕ್ರೀಡಾಂಗಣ ಸೌಲಭ್ಯ ಕಲ್ಪಿಸಿದರೆ ತಾಲೂಕಿನಲ್ಲಿಯೂ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾಪಟುಗಳಾಗಿ ಹೊರ ಹೊಮ್ಮಲಿದ್ದಾರೆ. ಸಂಬಂಧ ಪಟ್ಟ ಇಲಾಖೆಯವರು ಕ್ರೀಡಾಂಗಣಕ್ಕೆ ಸೂಕ್ತ ಸೌಲಭ್ಯ ಒದಗಿಸಬೇಕು.
ಪ್ರಶಾಂತ್ ಮತ್ತು ಪ್ರಮೋದ್, ಕ್ರೀಡಾಪಟುಗಳು

ಕ್ರೀಡಾಂಗಣದಲ್ಲಿ ಸ್ವಚ್ಛತೆ ಕೊರತೆ ಎದ್ದು ಕಾಣುತ್ತಿದೆ. ಸಮರ್ಪಕ ಶೌಚಗೃಹ ವ್ಯವಸ್ಥೆ ಇಲ್ಲ. ಕ್ರೀಡಾಂಗಣದಲ್ಲಿ ಕಲ್ಲುಗಳು ತುಂಬಿ ಹೋಗಿದೆ. ವಿದ್ಯಾರ್ಥಿಯರು ಗಾಯಗೊಂಡರೆ ಪ್ರಾಥಮಿಕ ಚಿಕಿತ್ಸಾ ಸೌಲಭ್ಯವಿಲ್ಲದೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವಂತ ಸಂದರ್ಭವಿದೆ. ಕುಡಿಯುವ ನೀರಿನ ವ್ಯವಸ್ಥೆಯನ್ನೂ ಕಲ್ಪಿಸಿಲ್ಲ. ರಾಜ್ಯದ ವಿವಿಧಡೆ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡಿದ್ದೇನೆ. ಆದರೆ, ಹೋಲಿಕೆ ಮಾಡಿದಾಗ ಕ್ರೀಡಾಕೂಟದ ವ್ಯವಸ್ಥೆ ನೋಡಿದರೆ ಬೇಸರ ಬರುತ್ತದೆ. ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವ ಬದಲು ಆಯೋಜಿಸದ್ದರೆ ಒಳಿತು.
ಪ್ರೀತಿ, ರಾಷ್ಟ್ರ ಮಟ್ಟದ ಕ್ರೀಡಾಪಟು

ಕ್ರೀಡಾಂಗಣದಲ್ಲಿ ಆಯೋಜಕರು ಕ್ರೀಡಾಕೂಟ ಆಯೋಜಿಸುವಾಗ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕನಿಷ್ಟ ಗಮನವನ್ನು ನೀಡದೇ ಇರುವುದು ಕಂಡು ಬಂದಿತು. ಕ್ರೀಡಾಕೂಟಗಳಲ್ಲಿ ಅನೇಕರು ಬಿದ್ದು ಎದ್ದು ಗಾಯಗೊಂಡರೆ ಪ್ರಥಮ ಚಿಕಿತ್ಸೆ ನೀಡುವ ವ್ಯವಸ್ಥೆ ಸಹ ಇರಲಿಲ್ಲ. ಕ್ರೀಡಾಕೂಟಗಳನ್ನು ಆಯೋಜಿಸುವಾಗ ಅಂಬ್ಯುಲೆನ್ಸ್ ವ್ಯವಸ್ಥೆ ಇರಬೇಕು ಎನ್ನುವ ಬಗ್ಗೆ ಗಮನ ನೀಡದೇ ಸಮೀಪದಲ್ಲಿ ಸರ್ಕಾರಿ ಆಸ್ಪತ್ರೆ ಇದೆ ಎಂದು ಆಯೋಕರು ಬೇಜವಾಬ್ದಾರಿ ತನದಿಂದ ವರ್ತಿಸಿದರು ಎಂಬುದು ಕ್ರೀಡಾಪಟುಗಳ ಆರೋಪ.

Also read: ಭರಮಸಾಗರದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವ ಸಂಪನ್ನ

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಖೋಖೋ, ಕಬಡ್ಡಿ, ವಾಲಿಬಾಲ್, ಥ್ರೋಬಾಲ್ ಪಂದ್ಯಾವಳಿಗಳನ್ನು ಯುವಕ-ಯುವತಿಯರಿಗೆ ಆಯೋಜಿಸಲಾಗಿತ್ತು. ಆದರೆ, ಅಥ್ಲೆಟಿಕ್ಸ್ ಕ್ರೀಡಾಪಟುಗಳು ರನ್ನಿಂಗ್ ಟ್ರ್ಯಾಕ್ ಸಮರ್ಪಕವಾಗಿಲ್ಲದೇ ಅನೇಕರು ಗಾಯಗೊಂಡರು. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸಿದ ಕ್ರೀಡಾಪಟುಗಳು ಸಹ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ತೋರಲು ಸಾಧ್ಯವಾಗದೆ ಬೇಸರ ವ್ಯಕ್ತಪಡಿಸುವ ಸ್ಥಿತಿ ಎದುರಾಯಿತು. ಇನ್ನು ಖೋಖೋ, ಕಬಡ್ಡಿ ಅಂಕಣಗಳಂತೂ ಕ್ರೀಡಾಪಟುಗಳಿಗೆ ವ್ಯತಿರಿಕ್ತ ಪರಿಣಾಮ ಬೀರಿತು. ಎಲ್ಲೆಂದರಲ್ಲಿ ಬೆಳೆದ ಹುಲ್ಲುಗಳು, ಕಲ್ಲು ಮಿಶ್ರಿತ (ಗೊಚ್ಚು ಕಲ್ಲು) ಅಂಕಣದಿಂದಾಗಿ ಕ್ರೀಡಾಪಟುಗಳಿಗೆ ಸ್ಪರ್ಧೆಯ ಹುಮ್ಮಸ್ಸು ಮೊಟಕುವಾಗುವಂತೆ ಮಾಡಿತು ಎಂಬುದು ಕ್ರೀಡಾಭಿಮಾನಿಗಳ ಆರೋಪವಾಗಿದೆ.
ಕ್ರೀಡಾಂಗಣದಲ್ಲಿ ಸಮರ್ಪಕ ಶೌಚಗೃಹ ಇಲ್ಲದೇ ವಿದ್ಯಾರ್ಥಿನಿಯರು ಮತ್ತು ಯುವತಿಯರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಆರೋಗ್ಯ ಇಲಾಖೆಯ ಮಹಿಳಾ ಸಿಬ್ಬಂದಿಯೂ ಸಹ ಇಲ್ಲದಿರುವುದು ಕಂಡು ಬಂದಿತು. ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸಂಪೂರ್ಣ ಅವ್ಯವಸ್ಥೆಯ ಆಗರವಾಗಿದ್ದು, ಆಯೋಜಕರಿಗೆ ಅನುಕೂಲ ಸಿಂಧುವಾಗಿತ್ತು. ಇಂತಹ ಕ್ರೀಡಾಕೂಟಗಳನ್ನು ಆಯೋಜನೆ ಮಾಡಿರುವ ಬಗ್ಗೆ ಕ್ರೀಡಾಪಟುಗಳು ಬೇಸರ ವ್ಯಕ್ತಪಡಿಸಿದರು.

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share196Tweet123Send
Previous Post

ಭರಮಸಾಗರದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವ ಸಂಪನ್ನ

Next Post

ಜೈನ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದಂತ ತಪಾಸಣೆ ಶಿಬಿರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜೈನ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದಂತ ತಪಾಸಣೆ ಶಿಬಿರ

ಜೈನ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದಂತ ತಪಾಸಣೆ ಶಿಬಿರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.6, 7ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 5, 2026
ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

June 5, 2026
ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

June 5, 2026
ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

June 5, 2026
ಬಿಎಂಟಿಸಿಗೆ ಕೇಂದ್ರದಿಂದ ಬರಲಿದೆ 4500 ವಿದ್ಯುತ್ ಚಾಲಿತ ಬಸ್ | ಸಚಿವ ರಾಮಲಿಂಗಾ ರೆಡ್ಡಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೊಡ್ಡ ಶಾಕ್ | ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL