ಕಲ್ಪ ಮೀಡಿಯಾ ಹೌಸ್ | ಸೊರಬ |
ಮಹಿಳೆ ಕೇವಲ ವ್ಯಕ್ತಿಯಲ್ಲ, ಒಂದು ಅದ್ಭುತ ಶಕ್ತಿ ಮಹಿಳೆಯರನ್ನು ಗೌರವಿಸುವುದು ಪುಣ್ಯದ ಕೆಲಸ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಶಂಕರ್ ಶೇಟ್ ತಿಳಿಸಿದರು.
ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿ ವೃತ್ತ ನಿರೀಕ್ಷಕರಾದ ಶ್ರೀಮತಿ ಭಾಗ್ಯವತಿ ಬಂತಿ ಅವರನ್ನು ಸನ್ಮಾನಿಸಿ ಮಾತನಾಡಿದರು.
ಮಹಿಳೆ ನಾಲ್ಕು ಗೋಡೆಗಳ ನಡುವೆ ಕಾಲಕಳೆಯುವ ಕಾಲವೀಗ ಕಣ್ಮರೆಯಾಗಿ, ಪುರುಷ ಪ್ರಧಾನ ಸಮಾಜದಲ್ಲಿ ಪುರುಷರಷ್ಟೇ ಧೀಮಂತಿಕೆಯಿಂದ ಬದುಕಲು ಸಾಧ್ಯವಿದೆಯೆಂದು ಹಲವಾರು ರೀತಿಯ ಸಾಧನೆಗಳನ್ನು ಮಾಡುವುದರ ಮೂಲಕ ತೋರಿಸಿ ಕೊಟ್ಟಿದ್ದಾಳೆ. ಎಲ್ಲಾ ಕ್ಷೇತ್ರದಲ್ಲೂ ಮುನ್ನಡೆಯುತ್ತಾ ಜಗತ್ತಿನ ದೃಷ್ಟಿಯನ್ನು ತನ್ನೆಡೆ ಸೆಳೆದಿದ್ದಾಳೆ. ಸಾಧಕಿಯರು ನಮ್ಮೊಳಗೆ ಇರುತ್ತಾರೆ ಅವರನ್ನು ಗುರುತಿಸಿ, ಬೆಳೆಸಿ ಪ್ರೋತ್ಸಾಹಿಸುವ ಕೆಲಸವನ್ನು ಮಾಡಬೇಕು ಎಂದರು.
“ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೇ ತತ್ರ ದೇವತಾ ” ಎಲ್ಲಿ ಮಹಿಳೆಯರನ್ನ, ಸ್ತ್ರೀಯರನ್ನ, ಗೌರವದಿಂದ ಪೂಜ್ಯ ಭಾವನೆಯಿಂದ ಕಾಣುತ್ತಿವೆಯೋ ಅಲ್ಲಿ ದೇವತೆಗಳು ನೆಲೆಸಿರುತ್ತವೆ ಪ್ರಕೃತಿಗೂ ಹೆಣ್ಣಿಗೂ ಅವಿನಾಭಾವ ಸಂಬಂಧವಿದೆ. ಈಕೆ ಭೂಮಿಯಾಗಿ, ಮುಗಿಲಾಗಿ, ಮೇರುಪರ್ವತವಾಗಿ ಬೆಳೆದು ನಿಂತಿದ್ದಾಳೆ. ಹಾಗಾಗಿ ಸ್ತ್ರೀಯನ್ನು ಸಮೃದ್ದಿಯ ಸಂಕೇತವೆಂದು ಪರಿಭಾವಿಸಲಾಗಿದೆ. ಇಡಿ ವಿಶ್ವವೇ ಆರೋಗ್ಯಕರ ಮನೋಭಾವ ಹೊಂದಲು ಸಹಕಾರ ಶಕ್ತಿ ಸ್ತ್ರೀಯಾಗಿದ್ದಾಳೆ. ನಿಸರ್ಗದಲ್ಲಿ ಹಲವು ಬಗೆಯ ವೈವಿಧ್ಯತೆಗಳಿರುವಂತೆ ಸ್ತ್ರೀಯರಲ್ಲೂ ಹಲವು ವಿಧದ ಮಹಿಳೆಯರನ್ನು ಕಾಣಬಹುದು. ಚರಿತ್ರೆಯಲ್ಲಿ ಹಿಂದೆ ಮಾತೃಪ್ರಧಾನ ಕುಟುಂಬಗಳಿದ್ದುದನ್ನು ನಾವು ಸ್ಮರಿಸಬಹುದಾಗಿದೆ ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ತನ್ನದೇ ಆದ ಗೌರವ ಇದೆ ಎಂದರು.
ಈ ಸುಸಂದರ್ಭದಲ್ಲಿ ವೃತ್ತ ನಿರೀಕ್ಷಕಾರದ ಭಾಗ್ಯವತಿ ಬಂತಿ ಅವರನ್ನು ಸನ್ಮಾನಿಸಿದ್ದು ಸಮಾಜದ ಎಲ್ಲಾ ಮಹಿಳೆಯರಿಗೆ ಸನ್ಮಾನಿಸಿದ ಹಾಗೆ ಆಗಿದೆ ಎಂದರು. ಕಾರ್ಯಕ್ರಮದಲ್ಲಿ ಪಿಎಸ್ಐ ನಾಗರಾಜ್, ಯುವ ಬ್ರಿಗೇಡ್ ನ ಸಂಚಾಲಕ ಮಹೇಶ್ ಖಾರ್ವಿ, ಅಕ್ಕನ ಬಳಗದ ಅಧ್ಯಕ್ಷ ರೇಣುಕಮ್ಮ ಗೌಳಿ, ಸುರಭಿ ಮಹಿಳಾ ಯಕ್ಷ ಬಳಗದ ಶ್ರೀಮತಿ ಸುಬ್ರಮಣ್ಯ, ಶ್ರೀಮತಿ ಶಿಲ್ಪಾ ಸತೀಶ್, ಅಕ್ಕನ ಬಳಗದ ಪೂರ್ಣಿಮಾ ಶಿವಯೋಗಿ, ರೇಖಾ ಸಂಗಣ್ಣ, ಗಣಪತಪ್ಪ, ಪೊಲೀಸ್ ಸಿಬ್ಬಂದಿಗಳಾದ ಉಷಾ, ಸುಚಿತ್ರ, ರಾಘು ಉಪಸ್ಥಿತರಿದ್ದರು.
ವರದಿ: ಮಧುರಾಮ್, ಸೊರಬ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















