No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Thursday, November 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಬೇಡ್ತಿ–ಅಘನಾಶಿನಿ ಉಳಿಸಿ: ಅ.10ರ ಬೆಂಗಳೂರು ಧರಣಿಗೆ ಮಲೆನಾಡಿನ ಮಣ್ಣಿನ ಮಕ್ಕಳಿಗೆ ಸ್ವಾಮೀಜಿ ಕರೆ

kalpa News by kalpa News
October 1, 2026
in News, ಸೊರಬ
0
Soraba Aghanashini Save River Oct 10 Bengaluru Protest
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವರದಿ: ಮಧುರಾಮ್, ಸೊರಬ |

ಬೇಡ್ತಿ–ಅಘನಾಶಿನಿ ನದಿಗಳು ಹಾಗೂ ಮಲೆನಾಡಿನ ಪರಿಸರ ಸಂರಕ್ಷಣೆಯ ಹೋರಾಟಕ್ಕೆ ಎಲ್ಲರೂ ಕೈಜೋಡಿಸಬೇಕು. ಅಕ್ಟೋಬರ್ 10ರಂದು ಬೆಂಗಳೂರಿನಲ್ಲಿ (Bengaluru) ನಡೆಯಲಿರುವ ಧರಣಿಯಲ್ಲಿ ಮಲೆನಾಡಿನ ಮಣ್ಣಿನ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪರಿಸರ ರಕ್ಷಣೆಯ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಚೈತನ್ಯ ರಾಜಾರಾಮ ಆಶ್ರಮದ ಶ್ರೀ ಬ್ರಹ್ಮಾನಂದ ಭಾರತಿ ಸ್ವಾಮೀಜಿ ಕರೆ ನೀಡಿದರು.

ಸೊರಬ (Soraba) ತಾಲ್ಲೂಕಿನ ವರದಾ ನದಿ ತೀರದಲ್ಲಿ ಆಧ್ಯಾತ್ಮಿಕ ಹಾಗೂ ಪರಿಸರ ಜಾಗೃತಿಯ ಸಂದೇಶ ಸಾರುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ನದಿಗಳು, ಕಾಡುಗಳು ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

dk shivakumar led karnataka government 100 days celebration

ಚಾತುರ್ಮಾಸ್ಯ ವ್ರತ ಸೀಮೋಲ್ಲಂಘನ

ಆಷಾಢ ಶುಕ್ಲ ಏಕಾದಶಿಯಿಂದ ಕಾರ್ತೀಕ ಶುಕ್ಲ ಏಕಾದಶಿಯವರೆಗೆ ನಾಲ್ಕು ತಿಂಗಳ ಕಾಲ ಆಚರಿಸುವ ಚಾತುರ್ಮಾಸ್ಯ ವ್ರತವನ್ನು ಶ್ರೀ ಬ್ರಹ್ಮಾನಂದ ಭಾರತಿ ಸ್ವಾಮೀಜಿ ಪೂರ್ಣಗೊಳಿಸಿದರು.

ಬಾಹ್ಯ ಚಟುವಟಿಕೆಗಳನ್ನು ಕಡಿಮೆ ಮಾಡಿಕೊಂಡು, ಇಂದ್ರಿಯ ನಿಗ್ರಹದೊಂದಿಗೆ ಅಂತರ್ಮುಖಿಯಾಗಿ ಆತ್ಮಾವಲೋಕನ ನಡೆಸಿ ಆಧ್ಯಾತ್ಮಿಕ ಉನ್ನತಿಯನ್ನು ಸಾಧಿಸುವ ಉದ್ದೇಶ ಹೊಂದಿರುವ ಚಾತುರ್ಮಾಸ್ಯ ವ್ರತವು ಸನಾತನ ಪರಂಪರೆಯಲ್ಲಿ ಮಹತ್ವದ ಆಚರಣೆಯಾಗಿದೆ. ವ್ರತದ ಸಮಾಪ್ತಿಯ ಅಂಗವಾಗಿ ಶ್ರೀಗಳು ಶಿರಳಿಯ ಲಕ್ಷ್ಮೀನಾರಾಯಣ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಅಲ್ಲಿಂದ ಬಾಡದಬೈಲು ಬಳಿಯ ವರದಾ ನದಿ ತೀರದವರೆಗೆ ಪಾದಯಾತ್ರೆ ನಡೆಸಿ ಚಾತುರ್ಮಾಸ್ಯ ವ್ರತದ ಸೀಮೋಲ್ಲಂಘನ ನೆರವೇರಿಸಿದರು. ಪಾದಯಾತ್ರೆಯ ಸಂದರ್ಭದಲ್ಲಿ ಭಕ್ತರು ಹಾಗೂ ಪರಿಸರ ಕಾರ್ಯಕರ್ತರು ಶ್ರೀಗಳೊಂದಿಗೆ ಹೆಜ್ಜೆ ಹಾಕಿದರು.

Soraba – Sagara : ವರದಾ ನದಿ ತೀರದಲ್ಲಿ ಕಾರ್ಯಕ್ರಮ

ವರದಾ ನದಿ ತೀರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಲೆನಾಡಿನ ನದಿಗಳು, ಕಾಡುಗಳು ಹಾಗೂ ಪರಿಸರದ ಸಂರಕ್ಷಣೆಯ ಅಗತ್ಯದ ಕುರಿತು ಜಾಗೃತಿ ಮೂಡಿಸಲಾಯಿತು. ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಜನರು ಸಂಘಟಿತರಾಗಿ ಧ್ವನಿ ಎತ್ತಬೇಕು ಎಂಬ ಸಂದೇಶವೂ ಈ ಸಂದರ್ಭದಲ್ಲಿ ವ್ಯಕ್ತವಾಯಿತು.PES Shivamogga

ವಿಶೇಷವಾಗಿ ಬೇಡ್ತಿ–ಅಘನಾಶಿನಿ ನದಿಗಳ ಸಂರಕ್ಷಣೆಗಾಗಿ ಅಕ್ಟೋಬರ್ 10ರಂದು ಬೆಂಗಳೂರಿನಲ್ಲಿ ನಡೆಯಲಿರುವ ಧರಣಿಯಲ್ಲಿ ಮಲೆನಾಡಿನ ಜನರು ಭಾಗವಹಿಸಬೇಕು ಎಂದು ಶ್ರೀ ಬ್ರಹ್ಮಾನಂದ ಭಾರತಿ ಸ್ವಾಮೀಜಿ ಕರೆ ನೀಡಿದರು.

ಮಲೆನಾಡಿನ ನದಿಗಳು ಹಾಗೂ ಪರಿಸರ ವ್ಯವಸ್ಥೆ ಕೇವಲ ಒಂದು ಪ್ರದೇಶದ ಸಂಪತ್ತಲ್ಲ. ಮುಂದಿನ ಪೀಳಿಗೆಗೆ ಅವುಗಳನ್ನು ಉಳಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಪರಿಸರ ಚಳವಳಿಗಳಿಗೆ ಜನಬೆಂಬಲ ಅಗತ್ಯ ಎಂಬ ಅಭಿಪ್ರಾಯವೂ ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು.

Also Read>> ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಮಧುಸೂದನ್ ನೇಮಕ

ಪರಿಸರ ಕಾರ್ಯಕರ್ತರು, ಭಕ್ತರ ಉಪಸ್ಥಿತಿ

ಕಾರ್ಯಕ್ರಮದಲ್ಲಿ ವೃಕ್ಷಲಕ್ಷ ಆಂದೋಲನದ ಅನಂತ ಹೆಗಡೆ ಅಶಿಸರ ಸೇರಿದಂತೆ ಹಲವು ಪರಿಸರ ಕಾರ್ಯಕರ್ತರು ಹಾಗೂ ಚೈತನ್ಯ ರಾಜಾರಾಮ ಆಶ್ರಮದ ಸದ್ಭಕ್ತರು ಉಪಸ್ಥಿತರಿದ್ದರು.

ಚಾತುರ್ಮಾಸ್ಯ ವ್ರತದ ಸೀಮೋಲ್ಲಂಘನದೊಂದಿಗೆ ಆಧ್ಯಾತ್ಮಿಕ ಆಚರಣೆಗೆ ತೆರೆ ಬಿದ್ದಿದ್ದು, ಇದೇ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಯ ಸಂದೇಶವನ್ನು ಜನರಿಗೆ ತಲುಪಿಸುವ ಪ್ರಯತ್ನವೂ ನಡೆಯಿತು. ಬೇಡ್ತಿ–ಅಘನಾಶಿನಿ ನದಿಗಳ ಉಳಿವಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಮಲೆನಾಡಿನ ಜನರ ಬೆಂಬಲ ಮುಂದುವರಿಯಬೇಕು ಎಂಬ ಆಶಯವನ್ನು ಶ್ರೀಗಳು ವ್ಯಕ್ತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Christ King

Kalahamsa Infotech private limited

Kalpa News Advertising Disclaimer

Tags: BENGALURUprotestSorabaಬೇಡ್ತಿ–ಅಘನಾಶಿನಿವರದಾ ನದಿಸೊರಬ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಮಧುಸೂದನ್ ನೇಮಕ

Next Post

ಫ್ಲಿಪ್‌ಕಾರ್ಟ್’ಗೆ ಶಿವಮೊಗ್ಗ ಕನ್ಸೂಮರ್ ಕೋರ್ಟ್ ದಂಡ, ಕಂಪೆನಿಗೆ ಚಾಟಿ | ಕಾರಣವೇನು?

kalpa News

kalpa News

Next Post
Shivamogga Consumer Court Fined to Flipkart

ಫ್ಲಿಪ್‌ಕಾರ್ಟ್'ಗೆ ಶಿವಮೊಗ್ಗ ಕನ್ಸೂಮರ್ ಕೋರ್ಟ್ ದಂಡ, ಕಂಪೆನಿಗೆ ಚಾಟಿ | ಕಾರಣವೇನು?

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL