ಕಲ್ಪ ಮೀಡಿಯಾ ಹೌಸ್
ಸೊರಬ: ತಾಲೂಕಿನ ಹಿರಿಯ ಹಾಗೂ ಕ್ರಿಯಾಶೀಲ ಪತ್ರಕರ್ತ ಅನ್ಸರ್ ಇಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ.
ಇಂದು ನಸುಕಿನಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾದ ಅವರ ಕೊನೆಯುಸಿರೆಳೆದಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಹಲವಾರು ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿದ್ದ ಅನ್ಸರ್, ಹಲವು ವರ್ಷಗಳ ಕಾಲ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದರು. ಕನ್ನಡ ಕಲಾ ಸಂಘಟಕರಾಗಿದ್ದು, ಎಲ್ಲ ವರ್ಗದವರಿಗೂ ಸಹಾಯ ಮಾಡುವ ಒಳ್ಳೆಯ ಗುಣ ಹೊಂದಿದ್ದರು.
ಅನ್ಸರ್ ಅವರ ನಿಧನದಿಂದಾಗಿ ತಾಲೂಕು ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟವಾಗಿದೆ. ಅನ್ಸರ್ ಅವರ ನಿಧನಕ್ಕೆ ಪಟ್ಟಣದ ಗಣ್ಯಾತಿಗಣ್ಯರು, ಜನಸಾಮಾನ್ಯರು ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post