ಕಲ್ಪ ಮೀಡಿಯಾ ಹೌಸ್ | ಸೊರಬ |
ಮಕ್ಕಳ ಮಾನಸಿಕ ಆರೋಗ್ಯ ಮತ್ತು ಭಾವನಾತ್ಮಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದ್ದು, ಮಕ್ಕಳ ಮನೋಭಾವನೆಗಳನ್ನು ಅರಿತು ಪ್ರೋತ್ಸಾಹಿಸುವುದು ಇಂದಿನ ಅಗತ್ಯವಾಗಿದೆ ಎಂದು ಸಂಪನ್ಮೂಲ ವ್ಯಕ್ತಿ ಜೆ.ಸಿ. ರಾಜಶೇಖರ್ ಹೇಳಿದರು.
ಅವರು ತಾಲೂಕಿನ ಹಳೇಸೊರಬದ ಆಶಾಕಿರಣ ಪಬ್ಲಿಕ್ ಸ್ಕೂಲ್‌ನಲ್ಲಿ ಪೋಷಕರಿಗೆ ಮಕ್ಕಳ ಮನಸ್ಥಿತಿ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳೊಂದಿಗೆ ನಿರಂತರ ಸಂವಾದ, ಸಮಯ ನೀಡುವಿಕೆ ಹಾಗೂ ಒತ್ತಡರಹಿತ ವಾತಾವರಣ ನಿರ್ಮಾಣದಿಂದ ಮಕ್ಕಳ ಸರ್ವಾಂಗೀಣ ಬೆಳವಣಿಗೆ ಸಾಧ್ಯವೆಂದು ತಿಳಿಸಿದರು.
ಮುಖ್ಯೋಪಾಧ್ಯಾಯಿನಿ ಶೋಭಾ ಮಾತನಾಡಿ, ಶಾಲೆ–ಪೋಷಕರ ಸಮನ್ವಯದಿಂದಲೇ ಮಕ್ಕಳ ಮಾನಸಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದರು. ಇಂತಹ ಕಾರ್ಯಕ್ರಮಗಳು ಪೋಷಕರಲ್ಲಿ ಜಾಗೃತಿ ಮೂಡಿಸಲು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು.
ಪೋಷಕ ಪ್ರತಿನಿಧಿ ರಾಜು ಹಿರಿಯವಲಿ ಮಾತನಾಡಿ, ಮಕ್ಕಳ ಭಾವನೆಗಳಿಗೆ ಸ್ಪಂದಿಸುವುದು ಇಂದಿನ ಅಗತ್ಯವಾಗಿದ್ದು, ಈ ರೀತಿಯ ಕಾರ್ಯಕ್ರಮಗಳು ಪೋಷಕರಿಗೆ ಮಾರ್ಗದರ್ಶನ ನೀಡುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಸಂಗಪ್ಪ ಪೋಷಕರು ಹಾಗೂ ಶಿಕ್ಷಕರು ಭಾಗವಹಿಸಿದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















