ಕಲ್ಪ ಮೀಡಿಯಾ ಹೌಸ್ | ಸೊರಬ |
ಕರ್ನಾಟಕ ವಕೀಲರ ಪರಿಷತ್ತಿನ ಮಾಜಿ ಅಧ್ಯಕ್ಷ, ಹಿರಿಯ ವಕೀಲ ಸದಾಶಿವ ರೆಡ್ಡಿ ಅವರ ಮೇಲೆ ಅಪರಿಚಿತರು ನಡೆಸಿದ ಹಲ್ಲೆಯನ್ನು ಖಂಡಿಸಿ ಸೋಮವಾರ ಪಟ್ಟಣದ ತಾಲೂಕು ಕಚೇರಿ ಮುಂಭಾಗ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸದಾಶಿವ ರೆಡ್ಡಿ ಅವರು ತಮ್ಮ ಕಚೇರಿಯಲ್ಲಿ ತಮ್ಮ ಸಹದ್ಯೋಗಿಯೊಂದಿಗೆ ಕೆಲಸ ಮಾಡುತ್ತಿರುವಾಗ ಇಬ್ಬರು ಅಪರಿಚಿತರು ಬಂದು ಹಲ್ಲೆ ಮಾಡಿದ್ದಾರೆ. ಈ ಅಮಾನವೀಯತೆಯ ಘಟನೆಯನ್ನು ವಕೀಲರ ಸಂಘ ಖಂಡಿಸುತ್ತದೆ. ಹಾಗೆಯೇ ಆರೋಪಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ವಕೀಲರ ಸಂಘದ ಅಧ್ಯಕ್ಷ ಸಿ.ವೈ. ಅಶೋಕ್, ಖಜಾಂಚಿ ಎಚ್. ಗೋಪಾಲ್, ಉಪಾಧ್ಯಕ್ಷೆ ಸಿ.ಬಿ. ಮಂಜುಳಾ, ಟಿ.ಕೆ. ಮಂಚಪ್ಪ, ಡಾಕಪ್ಪ ಹೆಸರಿ, ಸುಧಾಕರ ನಾಯ್ಕ್, ರಂಗನಾಥ ಚಕ್ರಪಾಣಿ, ರಾಮಪ್ಪ, ಗುರುಮೂರ್ತಿ, ಟಿ.ಜಿ. ಗುರುಮೂರ್ತಿ, ವಿನಯ್ ಪಾಟೀಲ್, ಆಶೀಕ್ ನಾಗಪ್ಪ, ವಿನಯ್ ಪಾಟೀಲ್, ಕೆ.ಟಿ. ಲಕ್ಷ್ಮಣ, ಜ್ಯೋತಿ, ಶಮಾ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post