ಕಲ್ಪ ಮೀಡಿಯಾ ಹೌಸ್ | ಸೊರಬ |
ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಆ.15ರಂದು ಪಟ್ಟಣದಿಂದ ಶಿಕಾರಿಪುರ ತಾಲೂಕಿನ ಈಸೂರಿನವರೆಗೆ ಬೈಕ್ ರ‌್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ತಿಳಿಸಿದ್ದಾರೆ.
ದೇಶದಲ್ಲಿಯೇ ಮೊದಲ ಸ್ವಾತಂತ್ರ್ಯ ಘೋಷಿಸಿಕೊಂಡ ಗ್ರಾಮವಾದ ಈಸೂರಿನಲ್ಲಿ ಎರಡನೇ ಬಾರಿ ಸ್ವಾತಂತ್ರೋತ್ಸವದಲ್ಲಿ ಪಾಲ್ಗೊಳ್ಳುವ ಜೊತೆಗೆ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದ ಯೋಧರ ಸ್ಮಾರಕಕ್ಕೆ ನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಆಗಸ್ಟ್ 15ರ ಬೆಳಗ್ಗೆ 7ಗಂಟೆಗೆ ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದಿಂದ ಶಿರಾಳಕೊಪ್ಪ, ಶಿಕಾರಿಪುರ ಮಾರ್ಗವಾಗಿ ಈಸೂರು ಗ್ರಾಮವನ್ನು ತಲುಪಲಾಗುವುದು. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಹುತಾತ್ಮರಿಗೆ ನಮನ ಸಲ್ಲಿಸುವ ಉದ್ದೇಶದಿಂದ ಬೈಕ್ ರ‌್ಯಾಲಿ ಹಮ್ಮಿಕೊಳ್ಳಲಾಗಿದೆ. ಕಳೆದ ವರ್ಷ ಬೈಕ್ ರ‌್ಯಾಲಿ ಮಾಡಿದಾಗ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಬಾರಿಯ ಬೈಕ್ ರ‌್ಯಾಲಿಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















