ಕಲ್ಪ ಮೀಡಿಯಾ ಹೌಸ್ | ಸೊರಬ |
ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಆ.೧೫ರಂದು ಪಟ್ಟಣದಿಂದ ಶಿಕಾರಿಪುರ ತಾಲೂಕಿನ ಈಸೂರಿನವರೆಗೆ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ತಿಳಿಸಿದ್ದಾರೆ.
ದೇಶದಲ್ಲಿಯೇ ಮೊದಲ ಸ್ವಾತಂತ್ರ ಗ್ರಾಮವಾದ ಈಸೂರಿನಲ್ಲಿ ಈ ಬಾರಿ ಸ್ವಾತಂತ್ರೋತ್ಸವದಲ್ಲಿ ಪಾಲ್ಗೊಳ್ಳುವ ಜೊತೆಗೆ ಸ್ವಾತಂತ್ರೋತ್ಸವ ಯೋಧರ ಸ್ಮಾರಕಕ್ಕೆ ನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 5 ಗಂಟೆಗೆ ಸೊರಬದಿಂದ ಹೊರಟು ಶಿರಾಳಕೊಪ್ಪ, ಶಿಕಾರಿಪುರ ಮಾರ್ಗವಾಗಿ ಈಸೂರು ಗ್ರಾಮವನ್ನು ತಲುಪಲಾಗುವುದು. ದೇಶದ ಸ್ವಾತಂತ್ರ್ಯಾಕ್ಕಾಗಿ ತ್ಯಾಗ ಬಲಿದಾನ ಮಾಡಿದ ಹುತಾತ್ಮರಿಗೆ ನಮನ ಸಲ್ಲಿಸುವ ಉದ್ದೇಶದಿಂದ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















