No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಪ್ರಾಶಸ್ತ್ಯ ಮತಗಳಿಂದ ಡಾ. ಸರ್ಜಿ, ಭೋಜೇಗೌಡರ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ ವಿಶ್ವಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 3, 2024
in ಸೊರಬ
0
ಬೆಳಗಾವಿ ಮಹಿಳೆ ಬೆತ್ತಲೆ ಘಟನೆ ದ್ರೌಪದಿ ವಸ್ತ್ರಾಪಹರಣಕ್ಕೂ ಕ್ರೂರ: ವಿಜಯೇಂದ್ರ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ವಿಧಾನ ಪರಿಷತ್ ಚುನಾವಣೆಯನ್ನು #Parishad Election ಬಿಜೆಪಿಯು ಗಂಭೀರವಾಗಿ ಪರಿಗಣಿಸಿದ್ದು, ಈ ಬಾರಿಯ ಚುನಾವಣೆಯಲ್ಲಿ ಪದವೀಧರರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದಿಂದ ಭೋಜೇಗೌಡ ಮೊದಲ ಪ್ರಾಶಸ್ತ್ಯ ಮತಗಳಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶನಿವಾರ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಪದವೀಧರರ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಡೆ ಪ್ರವಾಸ ಕೈಗೊಂಡ ವೇಳೆಯಲ್ಲಿ ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳ ಪರವಾಗಿ ಉತ್ತಮ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಗೆಲುವಿನ ವಾತಾವರಣ ಎದ್ದು ಕಾಣುತ್ತಿದ್ದು, ಡಾ. ಧನಂಜಯ ಸರ್ಜಿ ಮತ್ತು ಭೋಜೇಗೌಡರು ಗೆಲ್ಲುವುದು ಶತಸಿದ್ಧ ಎಂದರು.
ಗ್ಯಾರಂಟಿ ಯೋಜನೆಗಳ ಮೂಲಕವೇ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದಾಗಿ ಕಾಂಗ್ರೆಸ್ ಭ್ರಮೆಯಲ್ಲಿದೆ. ಅವರ ಕನಸ್ಸು ನುಚ್ಚು ನೂರಾಗಲಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮೂರು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ. ಸೊರಬ ಕ್ಷೇತ್ರದಲ್ಲಿ ಸುಮಾರು ಹತ್ತು ಸಾವಿರ ಮತಗಳ ಬಹುಮತ ದೊರೆಯಲಿದೆ. ಜಿಲ್ಲೆಯ ಅಭಿವೃದ್ಧಿಗೆ ಬಿ.ಎಸ್. ಯಡಿಯೂರಪ್ಪ ಮತ್ತು ಬಿ.ವೈ. ರಾಘವೇಂದ್ರ ಅವರ ಕೊಡುಗೆ ಸಾಕಷ್ಟಿದ್ದು, ಕ್ಷೇತ್ರದಲ್ಲಿಯೂ ಸಹ ಅಭಿವೃದ್ಧಿಯ ಶಕೆ ಆರಂಭವಾಗಿದ್ದು, ಹರತಾಳ ಹಾಲಪ್ಪ ಅವರು ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಮಂತ್ರಿಯಾದ ಸಂದರ್ಭದಲ್ಲಿ ಆರಂಭವಾಯಿತು ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಲ್ಲಿ ಪ್ರಚಾರದ ಜಾಹೀರಾತಲ್ಲಿ ತೊಡಗಿದೆ ವಿನಃ ಜನತೆಯ ಪಾಲಿಗೆ ಬದುಕಿದ್ದು ಸತ್ತಂತಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ಜರುತ್ತಿಲ್ಲ. ಕಳೆದ ಒಂದು ವರ್ಷದಿಂದ ಯಾವುದೇ ಗುದ್ದಲಿ ಪೂಜೆಗಳು ಸರ್ಕಾರದಿಂದ ಜರುಗಿಲ್ಲ ಮತ್ತು ಹೊಸ ಯೋಜನೆಗಳು ಜಾರಿಯಾಗಿಲ್ಲ. ಕಳೆದೊಂದು ವರ್ಷದಿಂದ ಜನರ ಮೇಲೆ ಕಿವಿ ಮೇಲೆ ಹೂವಿಡುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿಯ ಸ್ಪರ್ಧೆಯಿಂದ ಪಕ್ಷಕ್ಕೆ ತೊಡಕಾಗದು. ಈ ಹಿಂದೆ ಅವರಿಗೆ ಪಕ್ಷದಿಂದ ಎಲ್ಲಾ ಅವಕಾಶಗಳನ್ನು ನೀಡಿದೆ. ಪಕ್ಷದಿಂದ ಎಲ್ಲವನ್ನು ಪಡೆದು ಎಡವಿದ್ದಾರೆ. ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರೇ ಈ ಹಿಂದೆ ಡಾ. ಧನಂಜಯ ಸರ್ಜಿಯವರನ್ನು ಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿಸಬೇಕು ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು ಎಂದ ಅವರು, ಕಾಂಗ್ರೆಸ್ ಸರ್ಕಾರ ಯಾವುದೇ ಕ್ಷಣದಲ್ಲಿ ಬೀಳುವ ಸಂದರ್ಭವಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲ್ಲಲೇ ಬೇಕು ಎನ್ನುವ ವಿಶ್ವಾಸದೊಂದಿಗೆ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು ಹಾಗೂ ಸ್ಥಳೀಯ ಸಂಸ್ಥೆಗಳಾದ ತಾಪಂ, ಜಿಪಂ ಚುನಾವಣೆಯಲ್ಲಿ ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೆ ಟಿಕೇಟ್ ನೀಡಲಾಗುವುದು ಎಂದರು.

Also read: ಕೆಸಿಇಟಿ ಫಲಿತಾಂಶ: 100 ರೊಳಗೆ 10 ರ‍್ಯಾಂಕ್‌ ಪಡೆದ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು

ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಮಾತನಾಡಿ, ಪಕ್ಷದ ಕಾರ್ಯಕರ್ತರು ಪರಿಷತ್ ಚುನಾವಣೆಯಲ್ಲಿ ಪಕ್ಷದ ಸೂಚನೆಯಂತೆ ಶ್ರಮವಹಿಸಿ ದುಡಿಯುತ್ತಿದ್ದಾರೆ. ತಮಗೂ ಸಹ ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಪಕ್ಷದ ಅಧ್ಯಕ್ಷರು ಹೊಸ ಮಾದರಿಯಲ್ಲಿ ಮತದಾರರನ್ನು ತಲುಪಲು ನೂತನ ಯೋಜನೆಗಳನ್ನು ರೂಪಿಸಿದ್ದಾರೆ. ಅದು ಫಲಕಾರಿಯಾಗುತ್ತಿದೆ ಎಂದರು.

ಬಿಜೆಪಿ ತಾಲೂಕು ಅಧ್ಯಕ್ಷ ಟಿ. ಪ್ರಕಾಶ್, ತಾಲೂಕು ಪ್ರಭಾರಿ ಎನ್.ಕೆ. ಜಗದೀಶ್, ಟೌನ್ ಅಧ್ಯಕ್ಷ ಅಶೋಕ್ ಶೇಟ್, ಪುರಸಭೆ ಸದಸ್ಯ ಎಂ.ಡಿ. ಉಮೇಶ್, ಮಧುರಾಯ್ ಜಿ. ಶೇಟ್, ಪ್ರಮುಖರಾದ ದೇವೇಂದ್ರಪ್ಪ, ಶಿವಕುಮಾರ ಕಡಸೂರು, ಚನ್ನವೀರಪ್ಪ, ಗುರುಕುಮಾರ ಪಾಟೀಲ್, ಜಾನಕಪ್ಪ ಒಡೆಯರ್, ಮಲ್ಲಿಕಾರ್ಜುನ ದ್ವಾರಳ್ಳಿ, ಗೀತಾ ಮಲ್ಲಿಕಾರ್ಜುನ, ಸುಧಾ ಶಿವಪ್ರಸಾದ್, ವಿನಯ್ ಶೇರ್ವಿ, ಆಶೀಕ್ ನಾಗಪ್ಪ ಸೇರಿದಂತೆ ಇತರರಿದ್ದರು.

ಮೂರೇ ದಿನದಲ್ಲಿ ನಾಗೇಶ್ ರಾಜೀನಾಮೆ !
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಎರಡ್ಮೂರು ದಿನಗಳಲ್ಲಿ ರಾಜೀನಾಮೆ ನೀಡಲಿದ್ದಾರೆ. ಪಕ್ಷದ ವತಿಯಿಂದ ರಾಜ್ಯದ ಎಲ್ಲಡೆ ಪ್ರತಿಭಟನೆಗಳು ನಡೆಯುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣವನ್ನು ತೆಲಂಗಾಣ ಮತ್ತು ಆಂದ್ರ ಪ್ರದೇಶದ ಖಾಸಗಿ ಕಂಪನಿಗಳಿಗೆ ನೀಡುವ ಮೂಲಕ ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಹೈಕಮಾಂಡ್‍ಗೆ ಹಣವನ್ನು ವರ್ಗಾಹಿಸಲಾಗಿದೆ ಎನ್ನಲಾಗುತ್ತಿದ್ದು, ಈ ಬಗ್ಗೆ ಸಮಗ್ರ ತನಿಖೆಗಾಗಿ ಸಿಬಿಐಗೆ ವರ್ಗಾಯಿಸಬೇಕು ಎಂದು ಬಿಜೆಪಿ ಆಗ್ರಹಿಸುತ್ತಿದ್ದಂತೆ ತರಾತುರಿಯಲ್ಲಿ ರಾಜ್ಯ ಸರ್ಕಾರ ಎಸ್‍ಐಟಿ ರಚಿಸಿದೆ. ಇದೇ ಮಾದರಿ ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

                                                  

Tags: B Y VijayendraKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaParishad ElectionShimogaShivamogga NewsSorabaಬಿ.ವೈ. ವಿಜಯೇಂದ್ರಮಲೆನಾಡು_ಸುದ್ಧಿವಿಧಾನ ಪರಿಷತ್ ಚುನಾವಣೆಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

ಕೆಸಿಇಟಿ ಫಲಿತಾಂಶ: 100 ರೊಳಗೆ 10 ರ‍್ಯಾಂಕ್‌ ಪಡೆದ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು

Next Post

ರಕ್ತದಾನ ಮಾಡುವುದು ಪ್ರತೀ ಆರೋಗ್ಯವಂತ ವ್ಯಕ್ತಿಯ ಕರ್ತವ್ಯ: ಡಾ. ಪ್ರಭು ಸಾಹುಕಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಕ್ತದಾನ ಮಾಡುವುದು ಪ್ರತೀ ಆರೋಗ್ಯವಂತ ವ್ಯಕ್ತಿಯ ಕರ್ತವ್ಯ: ಡಾ. ಪ್ರಭು ಸಾಹುಕಾರ್

ರಕ್ತದಾನ ಮಾಡುವುದು ಪ್ರತೀ ಆರೋಗ್ಯವಂತ ವ್ಯಕ್ತಿಯ ಕರ್ತವ್ಯ: ಡಾ. ಪ್ರಭು ಸಾಹುಕಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

May 5, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ | ಸಾರ್ವಜನಿಕರಲ್ಲಿ ಆತಂಕ ಬೇಡ: ಜಿಲ್ಲಾಧಿಕಾರಿ ಸ್ಪಷ್ಟನೆ

May 5, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗಮನಿಸಿ! ಈ ದಿನ ಬೆಂಗಳೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

May 5, 2026
ರಿಯಾ ಆಯಿಶಾಗೆ ಬಿಎ 9ನೇ ರ್‍ಯಾಂಕ್‌

ರಿಯಾ ಆಯಿಶಾಗೆ ಬಿಎ 9ನೇ ರ್‍ಯಾಂಕ್‌

May 5, 2026
ಎಸ್‌ಆರ್‌ಎನ್‌ಎಂ ಕಾಲೇಜಿಗೆ ಕುವೆಂಪು ವಿವಿ ರ‍್ಯಾಂಕ್

ಎಸ್‌ಆರ್‌ಎನ್‌ಎಂ ಕಾಲೇಜಿಗೆ ಕುವೆಂಪು ವಿವಿ ರ‍್ಯಾಂಕ್

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL