ಕಲ್ಪ ಮೀಡಿಯಾ ಹೌಸ್ | ಸೊರಬ |
ಬಾಂಗ್ಲಾದೇಶದಲ್ಲಿ ಅಲ್ಲಿನ ಮೂಲಭೂತವಾದಿಗಳಿಂದ ಹಿಂಸೆಗೆ ಒಳಗಾಗುತ್ತಿರುವ ಹಿಂದೂಗಳಿಗೆ ಭಾರತದ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡಬೇಕು ಎಂದು ಹಿಂದೂ ಹಿತರಕ್ಷಣಾ ವೇದಿಕೆಯ ಕಾಳಿಂಗರಾವ್ ಆಗ್ರಹಿಸಿದರು.
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಸೋಮವಾರ ಪಟ್ಟಣದ ರೈತ ವೃತ್ತದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆ ಅಡಿಯಲ್ಲಿ ಹತ್ತಾರು ಸಂಘಟನೆಗಳ ಕಾರ್ಯಕರ್ತರು ಬೃಹತ್ ಮಾನವ ಸರಪಳಿ ನಿರ್ಮಿಸಿ ನಾಮ ಫಲಕ ಹಿಡಿದು ಪ್ರತಿಭಟನೆ ನಡೆಸಿದರು.
ಈ ವೇಳೆ, ಬಾಂಗ್ಲಾದೇಶದ ಸಂತ್ರಸ್ತ ಹಿಂದುಗಳಿಗೆ ಎಲ್ಲ ರೀತಿಯ ನೆರವು ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಅವರು ಮಾತನಾಡಿದರು.

ಬಾಂಗ್ಲಾದೇಶಿ ಹಿಂದುಗಳ ರಕ್ಷಣೆಗೆ ತಕ್ಷಣವೇ ಕೇಂದ್ರ ಸರ್ಕಾರ ಮುಂದಾಗಬೇಕು. ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಮತ್ತು ಹಿಂಸಾಚಾರ ಕುರಿತು ವಿಶೇಷ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದರು.

ಸಮಾಜ ಸೇವಕರಾದ ಡಾ. ಜ್ಞಾನೇಶ್ ಮಾತನಾಡಿ, ಭಾರತದಲ್ಲಿರುವ ಸೆಕ್ಯುಲರ್’ವಾದಿಗಳು ಮತ್ತು ಬುದ್ಧಿಜೀವಿಗಳು ಟರ್ಕಿಯಲ್ಲಿ ಅಥವಾ ಪ್ಯಾಲಿಸ್ತೈನ್’ನಲ್ಲಿ ಸಂಭವಿಸುವ ಘಟನೆಗಳಿಗೆ ಧ್ವನಿಯೆತ್ತುತ್ತಾರೆ. ಆದರೆ, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇದು ಅವರ ಡೋಂಗಿ ಮಾನಸಿಕತೆಯನ್ನು ತೋರಿಸುತ್ತದೆ ಎಂದು ದೂರಿದರು.
ಈ ಸಂದರ್ಭದಲ್ಲಿ ವಿವಿಧ ಸಾರ್ವಜನಿಕ ಸಂಘ ಸಂಸ್ಥೆಗಳ ಸದಸ್ಯರು, ಪದಾಧಿಕಾರಿಗಳು, ಹಿಂದೂಪರ ಸಂಘಟನೆಗಳ ಪ್ರತಿನಿಧಿಗಳು, ಸಮಾಜಿಕ ಚಿಂತಕರು, ರೈತರು ಹಾಗೂ ಹಿಂದೂಗಳು ಭಾಗವಹಿಸಿದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post