No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬದಲ್ಲಿ ಸಹೋದರರ ಸವಾಲ್! ಶಕ್ತಿ ಪ್ರದರ್ಶನದ ಮೂಲಕ ರಂಗೇರಿದ ಕ್ಷೇತ್ರದ ಕಣ

kalpa News by kalpa News
April 18, 2023
in ಸೊರಬ
0
ಸೊರಬದಲ್ಲಿ ಸಹೋದರರ ಸವಾಲ್! ಶಕ್ತಿ ಪ್ರದರ್ಶನದ ಮೂಲಕ ರಂಗೇರಿದ ಕ್ಷೇತ್ರದ ಕಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಸೊರಬ: ವಿಧಾನಸಭಾ ಚುನಾವಣೆಗೆ ಸೊರಬ ಕ್ಷೇತ್ರದಿಂದ ಬಿಜೆಪಿಯ ಕುಮಾರ್ ಬಂಗಾರಪ್ಪ ಹಾಗೂ ಕಾಂಗ್ರೆಸ್’ನ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ಮೂಲಕ ಕ್ಷೇತ್ರದಲ್ಲಿ ಸಹೋದರರ ಸವಾಲ್ ರಂಗೇರಿದೆ.

ಕುಮಾರ್ ಬಂಗಾರಪ್ಪ ನಾಮಪತ್ರ
ನಾಮಪತ್ರ ಸಲ್ಲಿಸುವ ಮೊದಲು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಕುಮಾರ ಬಂಗಾರಪ್ಪ, ಕಳೆದ ಐದು ವರ್ಷಗಳ ಅವಧಿಯಲ್ಲಿ ತಾಲ್ಲೂಕಿನಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊAಡು ಚುನಾವಣೆ ಎದುರಿಸಲಿದ್ದೇನೆ ಎಂದರು.
ಜನತೆ ಇನ್ನಷ್ಟು ಅಭಿವೃದ್ಧಿಯ ದಾಹದಲ್ಲಿದ್ದಾರೆ. ಕಳೆದ ಬಾರಿ ಗೆಲುವು ತಂದುಕೊಟ್ಟ ಮತದಾರರಿಗೆ ಯಾವುದೇ ರೀತಿಯಿಂದಲೂ ಮೋಸ ಮಾಡಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸಂಸದ ಬಿ.ವೈ. ರಾಘವೇಂದ್ರ ಮೂಲಕ ತಾಲೂಕಿಗೆ ಸುಮಾರು 2 ಸಾವಿರ ಕೋಟಿಯಷ್ಟು ಅನುದಾನವನ್ನು ಮಂಜೂರು ಮಾಡಿಸಿಕೊಂಡು ನೀರಾವರಿ ಯೋಜನೆ, ರಸ್ತೆ, ಚರಂಡಿ, ವಿದ್ಯುತ್’ನಂತಹ ಮೂಲಭೂತ ಸಮಸ್ಯೆಗಳಿಗೆ ವಿನಿಯೋಗಿಸಿ, ಜನರ ವಿಶ್ವಾಸಕ್ಕೆ ಚ್ಯುತಿ ತಂದಿಲ್ಲ ಎಂದರು.

ಮುಂದಿನ ದಿನಗಳಲ್ಲಿಯೂ 25 ವರ್ಷಗಳ ಮುಂದಾಯೋಚನೆ ಇಟ್ಟುಕೊಂಡು ತಾಲೂಕಿನ ಅಭಿವೃದ್ಧಿಯನ್ನು ಮಾಡುವ ಎಲ್ಲಾ ರೀತಿಯ ತಯಾರಿ ನಡೆಸಿದ್ದು, ನಂಜುಂಡಪ್ಪ ವರದಿಯಲ್ಲಿ ಅತ್ಯಂತ ಹಿಂದುಳಿದ ತಾಲೂಕೆಂದು ಗುರ್ತಿಸಿಕೊಂಡಿರುವ ಸೊರಬವನ್ನು ರಾಜ್ಯದಲ್ಲಿಯೇ ಮಾದರಿ ತಾಲೂಕನ್ನಾಗಿಸುವ ಗುರಿ ಹೊಂದಲಾಗಿದೆ ಎಂದ ಅವರು, ಹಿಂದೆ ನೀಡಿದ ಸಹಕಾರವನ್ನು ಮುಂದೆಯೂ ನೀಡುವ ಮೂಲಕ ಕಮಲಕ್ಕೆ ಮತ ನೀಡಿ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಕಾರಣೀಕರ್ತರಾಗಬೇಕು ಎಂದು ಕರೆ ನೀಡಿದರು.
ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ತಾಲೂಕು ಅಭಿವೃದ್ಧಿ ಕಂಡಿದೆ ಎಂದರೆ ಅದಕ್ಕೆ ಕುಮಾರ ಬಂಗಾರಪ್ಪ ಅವರ ಮುಂದಾಲೋಚನೆಯ ಚಿಂತನೆ ಮತ್ತು ಪರಿಶ್ರಮವೇ ಕಾರಣವಾಗಿದೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಸಮಸ್ಯೆಗಳ ಸುಳಿಯಲ್ಲಿದ್ದ ಸೊರಬ ಅಭಿವೃದ್ಧಿ ಕಂಡಿದೆ. ಈವರೆಗಿನ ಅವರ ಅಭಿವೃದ್ಧಿಯೇ ಗೆಲುವಿನ ಹಾದಿ ತೋರಿಸುತ್ತದೆ. ಆದ್ದರಿಂದ ಅಭಿವೃದ್ಧಿ ರಾಜಕಾರಣಕ್ಕೆ ತಮ್ಮ ಮತ ಎಂದಿಗೂ ಮೀಸಲಿಡುವ ಮೂಲಕ ಬೆಂಬಲಿಸಬೇಕು ಎಂದರು.

ನAತರ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ಮುಂಭಾಗದಿಂದ ಮುಖ್ಯರಸ್ತೆಯ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಪ್ರವೀಣ್ ಜೈನ್ ಅವರಿಗೆ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ನಾಮಪತ್ರ ಸಲ್ಲಿಸಿದರು. ಅಭಿಮಾನಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಚುನಾವಣಾ ಉಸ್ತುವಾರಿ ಡಿ.ಎಸ್. ಅರುಣ್, ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ, ಮಂಡಲ ಪ್ರಭಾರಿ ಶ್ರೀನಾಥ, ಸೊರಬ ಮಂಡಲ ಅಧ್ಯಕ್ಷ ಪ್ರಕಾಶ ತಲಕಾಲುಕೊಪ್ಪ, ಉಪಾಧ್ಯಕ್ಷ ದೇವೇಂದ್ರಪ್ಪ ಚನ್ನಾಪುರ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ರಾಜನಂದಿನಿ ಮೊದಲಾದವರು ಇದ್ದರು.
Kalahamsa Infotech private limitedಮಧು ಬಂಗಾರಪ್ಪ ಉಮೇದುವಾರಿಕೆ
ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ಮೂಲಕ ತಮ್ಮ ಸಹೋದರನಿಗೆ ಸವಾಲ್ ಹಾಕಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಜನಪರ ಕಾಳಜಿ, ನಿರಂತರ ಜನ ಸಂಪರ್ಕ ಹಾಗೂ ಉತ್ತಮ ಬಾಂಧವ್ಯ ಬಂಗಾರಪ್ಪ ಅವರು ಹಾಕಿಕೊಟ್ಟ ಹಾದಿಯಾಗಿದ್ದು, ಅದೇ ಹಾದಿಯಲ್ಲಿ ಸಾಗುತ್ತಿರುವ ನಾನು ರಾಜ್ಯದಲ್ಲಿ ಒಬ್ಬ ನಾಯಕನಾಗಿ ಬೆಳೆಯಲು ಉತ್ತಮ ಅವಕಾಶ ಲಭಿಸಿದೆ. ಇದಕ್ಕೆಲ್ಲ ಕಾರಣ ತಾಲ್ಲೂಕಿನ ಮತದಾರರು. ಅವರಿಗೆ ನಾನು ಹಾಗೂ ನನ್ನ ಕುಟುಂಬ ಚಿರಋಣಿ ಎಂದ ಅವರು, ಇಂದು ಎಸ್. ಬಂಗಾರಪ್ಪನವರೇ ನಾಮಪತ್ರ ಸಲ್ಲಿಸಿದಂತಹ ಅನುಭವ ನನಗಾಗಿದೆ ಎಂದರು.

ಈ ಹಿಂದೆ ನೀರಾವರಿಗಾಗಿ ಮತ್ತು ಬಗರ್‌ಹುಕುಂ ಸಾಗುವಳಿದಾರರ ಹಕ್ಕುಪತ್ರಕ್ಕಾಗಿ ಪಾದಯಾತ್ರೆ ಮಾಡಿದ್ದೇನೆ. ಕಚವಿ ಏತ ನೀರಾವರಿ ಯೋಜನೆಗೆ 16 ಕೋಟಿ ರೂ. ಮಂಜೂರು ಮಾಡಿಸಿದ್ದೇನೆ. ನನ್ನ ಅವಧಿಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಬಗರ್‌ಹುಕುಂ ಹಕ್ಕುಪತ್ರಗಳನ್ನು ವಿತರಿಸಿ ಹೆಗ್ಗಳಿಕೆ ಇದೆ.
ಡಬಲ್ ಇಂಜಿನ್ ಸರ್ಕಾರದಿಂದ ರೋಸಿ ಹೋಗಿರುವ ರಾಜ್ಯದ ಜನತೆ ಬದಲಾವಣೆ ಬಯಸಿದ್ದಾರೆ. ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಪಕ್ಷ ಸೇರ್ಪಡೆಯಿಂದ ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಬಲ ಬಂದಿದೆ ಎಂದ ಅವರು, ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ನಡೆಸಿದ ಫಲದಿಂದಾಗಿ ಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಪಡೆಯವುದರ ಮೂಲಕ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೆರವಣಿಗೆಯಲ್ಲಿ ಸಹೋದರಿ ಗೀತಾ ಶಿವರಾಜ್‌ಕುಮಾರ್, ಸುಜಾತಾ ತಿಲಕ್‌ಕುಮಾರ್, ಪತ್ನಿ ಅನಿತಾ ಮಧು ಬಂಗಾರಪ್ಪ, ಪುತ್ರ ಸೂರ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಮುಖಂಡರಾದ ತಬಲಿ ಬಂಗಾರಪ್ಪ, ಎಚ್.ಗಣಪತಿ, ಕೆ. ಮಂಜುನಾಥ, ಕೆಪಿ ರುದ್ರಗೌಡ, ಶಿವಲಿಂಗೇಗೌಡ, ಸದಾನಂದಗೌಡ, ಸುರೇಶ್ ಹಾವಣ್ಣನವರ್, ಎಂ.ಡಿ. ಶೇಖರ್, ನಾಗಪ್ಪ ಮಾಸ್ತರ್, ಕೆ.ವಿ. ಗೌಡ, ಸುಜಾತ ಜೋತಾಡಿ, ತಾರಾ ಸತೀಶ್ ಮೊದಲಾದವರು ಇದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನನಗೆ ಟಿಕೇಟ್ ಕೈತಪ್ಪಲು ಬಿ.ಎಲ್. ಸಂತೋಷ್ ಕಾರಣ: ಜಗದೀಶ್ ಶೆಟ್ಟರ್ ನೇರ ವಾಗ್ದಾಳಿ

Next Post

ಮಹಿಳಾ ಅಧಿಕಾರಿಯ ಎಳೆದಾಡಿ ಹಲ್ಲೆ ಮಾಡಿದ ಸಮಾಜಘಾತುಕರು: ಅರಾಜಕತೆಯತ್ತ ಬಿಹಾರ ಆಡಳಿತ

kalpa News

kalpa News

Next Post
ಮಹಿಳಾ ಅಧಿಕಾರಿಯ ಎಳೆದಾಡಿ ಹಲ್ಲೆ ಮಾಡಿದ ಸಮಾಜಘಾತುಕರು: ಅರಾಜಕತೆಯತ್ತ ಬಿಹಾರ ಆಡಳಿತ

ಮಹಿಳಾ ಅಧಿಕಾರಿಯ ಎಳೆದಾಡಿ ಹಲ್ಲೆ ಮಾಡಿದ ಸಮಾಜಘಾತುಕರು: ಅರಾಜಕತೆಯತ್ತ ಬಿಹಾರ ಆಡಳಿತ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL