ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸೊರಬ: ಮಾರ್ಚ್ 19ರಿಂದ 24ರವರೆಗೂ ತಾಲೂಕಿನ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದ್ದು, ಕೊರೋನಾ ಹರಡುವ ಭೀತಿಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಗೆ ನಿಷೇಧ ಹೇರಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಆರು ದಿನಗಳ ಕಾಲ ನಡೆಯುವ ಐತಿಹಾಸಿಕ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಆದರೆ, ಕೋವಿಡ್-19 ಎರಡನೆಯ ಅಲೆ ಹರಡುವ ಭೀತಿಯೂ ಸಹ ಇದರ ನಡುವೆಯೇ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಾತ್ರೆಯಲ್ಲಿ ಸಾರ್ವಜನಿಕರಿಗೆ ಪಾಲ್ಗೊಳ್ಳಲು ಅವಕಾಶವಿಲ್ಲ. ಮಾತ್ರವಲ್ಲ ದರ್ಶನ ಪಡೆಯಲೂ ಸಹ ಅವಕಾಶವಿರುವುದಿಲ್ಲ ಎಂದಿದ್ದಾರೆ.

ಹಾಗೆಯೇ, ಜಾತ್ರೆಗೆ ಸಾರ್ವಜನಿಕರ ಪಾಲ್ಗೊಳ್ಳುವಿಕೆ ನಿಷೇಧ ಇರುವುದರಿಂದ ಈ ಅವಧಿಯಲ್ಲಿ ಯಾವುದೇ ರೀತಿಯ ವಾಣಿಜ್ಯ ಚಟುವಟಿಕೆಗಳ ಮಳಿಗೆಗಳನ್ನು ಹಾಕಲು ಅವಕಾಶವಿರುವುದಿಲ್ಲ ಎಂದು ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post