ಕಲ್ಪ ಮೀಡಿಯಾ ಹೌಸ್ | ಸೊರಬ |
ಇಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಡಬ್ಲ್ಯೂಡಿ ಕಾಲೋನಿ ಸೊರಬದಲ್ಲಿ ನಡೆದ ಶಾಲಾ ಪ್ರಾರಂಭೋತ್ಸವದ ನಿಮಿತ್ತ ಮಕ್ಕಳನ್ನು ಹೂಗುಚ್ಚ ನೀಡುವ ಮೂಲಕ ಹಾಗೂ ಜಾನಪದ ಕಲಾಮೇಳದೊಂದಿಗೆ ಸಿಹಿ ನೀಡಿ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬುಕ್ ಬ್ಯಾಂಕ್ ಮೂಲಕ ಪಠ್ಯಪುಸ್ತಕ, ಅಡುಗೆಯವರಿಗೆ ಏಪ್ರಾನ್ ವಿತರಿಸಲಾಯಿತು. ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಶಾಲಾ ಮುಖ್ಯ ಶಿಕ್ಷಕರಾದ ಎಸ್ ಕೃಷ್ಣಾನಂದರವರು ಕಲಿಕಾ ಚೇತರಿಕೆ ವರ್ಷದ ಪ್ರಾಮುಖ್ಯತೆ ಬಗ್ಗೆ ಹೇಳಿದರು.
ಬಿ ಆರ್ ಸಿ ಸಂಪನ್ಮೂಲ ವ್ಯಕ್ತಿಯಾಗಿರುವ ಸುರೇಶ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಎಸ್‌ಡಿಎಮ್‌ಸಿ ಅಧ್ಯಕ್ಷ ಶ್ರೀಕಾಂತ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರಾದ ಶೇಷಗಿರಿ, ರಾಜಾಭಕ್ಷ ಹಾಗೂ ಶಿಕ್ಷಕರ ವೃಂದದವರು, ಮಕ್ಕಳು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಊಟವನ್ನು ಏರ್ಪಡಿಸಲಾಗಿತ್ತು ಮಕ್ಕಳು ಸಂತೋಷದಿಂದ ಭಾಗವಹಿಸಲು ಆಟಗಳ ಮೂಲಕ ಶಾಲೆಯನ್ನು ಆರಂಭ ಮಾಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post