ಕಲ್ಪ ಮೀಡಿಯಾ ಹೌಸ್ | ಸೊರಬ |
ಭ್ರಷ್ಟಾಚಾರ ಮುಕ್ತವಾಗಿ ಆಡಳಿತ ನೀಡುವ ಉದ್ದೇಶದಿಂದ ಕ್ಷೇತ್ರದಲ್ಲಿ ಕೆಆರ್‌ಎಸ್ ಪಕ್ಷವನ್ನು ಪರಿಚಯ ಮಾಡಲಾಗುತ್ತಿದೆ ಎಂದು ಪಕ್ಷದ ಸೊರಬ ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಮಂಜುನಾಥ ಉಪ್ಪಳ್ಳಿ ಹೇಳಿದರು.
ಪಟ್ಟಣದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ 224 ಕ್ಷೇತ್ರಗಳಲ್ಲೂ ಕೆಆರ್‌ಎಸ್ ಪಕ್ಷದಿಂದ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಸೊರಬ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತವಾದ ಪಕ್ಷವನ್ನು ಆಡಳಿತಕ್ಕೆ ಬರಬೇಕು ಎನ್ನುವ ಉದ್ದೇಶ ಹೊಂದಲಾಗಿದೆ. ಜಿಲ್ಲೆಯಲ್ಲಿ ಶಿವಮೊಗ್ಗ, ತೀರ್ಥಹಳ್ಳಿ ಮತ್ತು ಸೊರಬ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದೆ ಎಂದರು.
Also read: ಈ ಎರಡು ದಿನ ಏರ್‌ಪೋರ್ಟ್ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ: ಬದಲಿ ಮಾರ್ಗ ಯಾವುದು? ಯಾವ ರಸ್ತೆಗೆ ಎಲ್ಲಿ ಪಾರ್ಕಿಂಗ್

ಕ್ಷೇತ್ರದಲ್ಲಿ ಸುಮಾರು 500 ಕಾರ್ಯಕರ್ತರು ಈಗಾಗಲೇ ಸಕ್ರಿಯರಾಗಿದ್ದು, ಮುನ್ನೆಲೆಯಲ್ಲಿ ಗುರುತಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ವಿವಿಧ ಹುದ್ದೆಗಳ ಹಂಚಿಕೆ ಮಾಡಲಾಗುವುದು. ಈಗಾಗಲೇ ತಾವು ಹಲವು ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದೇನೆ. ತಮ್ಮ ಸೇವಾ ಕಾರ್ಯವನ್ನು ಮೆಚ್ಚಿ ಪಕ್ಷ ನಿಯೋಜಿತ ಅಭ್ಯರ್ಥಿ ಎಂದು ಘೋಷಿಸಿದೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಉಮೇಶ್, ಪುನೀತ್, ಟೇಕರಾಜ ಉಪ್ಪಳ್ಳಿ, ಕುಶಾಲ್, ಪ್ರಜ್ವಲ್ ಉಪಸ್ಥಿತರಿದ್ದರು.
ವರದಿ: ಮಧುರಾಮ್, ಸೊರಬ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















