No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಮರಗಿಡಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಶ್ರೀಪಾದ ಬಿಚ್ಚುಗತ್ತಿ

kalpa News by kalpa News
June 7, 2022
in ಸೊರಬ
0
ಮರಗಿಡಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಶ್ರೀಪಾದ ಬಿಚ್ಚುಗತ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಮಾನವನ ಬದುಕಿಗೆ ಪರಿಸರದ ಕೊಡುಗೆ ಮರೆಯಲಾಗದು. ಮರಗಿಡಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅದಕ್ಕೆಂದೇ ನಮ್ಮ ಹಿರಿಯರು ಮರಗಿಡಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅನೇಕ ಮಾರ್ಗಗಳನ್ನು ಸಾಂಪ್ರದಾಯಿಕ ಪದ್ಧತಿ ರೂಢಿಸಿಕೊಂಡಿದ್ದರು. ಅವರ ದೂರದೃಷ್ಟಿಯ ಫಲವಾಗಿ ವೈಜ್ಞಾನಿಕ ಹಿನ್ನೆಲೆಯಲ್ಲಿ ಪರಿಸರದಿಂದ ಅನೇಕ ಉಪಯೋಗಗಳನ್ನು ಪಡೆಯುತ್ತಿದ್ದೇವೆ ಎಂದು ಇತಿಹಾಸ ಸಂಶೋಧಕರು ಮತ್ತು ಕನ್ನಡ ಸಾಂಸ್ಕೃತಿಕ ಜಗಲಿ ಗೌರವಾಧ್ಯಕ್ಷ ಶ್ರೀಪಾದ ಬಿಚ್ಚುಗತ್ತಿ ಹೇಳಿದರು.

ಸರ್ವೋದಯ ಗ್ರಾಮೀಣಾಭಿವೃದ್ಧಿ ಟ್ರಸ್ಟ್ (ರಿ) ಸೊರಬ ಇದರ ಟ್ರಸ್ಟಿ ಹೆಚ್. ಎಂ. ಪ್ರಶಾಂತ  ಇವರು ಹುಣವಳ್ಳಿ ಗ್ರಾಮದ ತಮ್ಮ ಮನೆ ಪರಿಸರದಲ್ಲಿ ಕುಟುಂಬದವರೊಂದಿಗೆ ಜೂನ್ 5ನೇ ತಾರೀಖಿನಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ವಿವಿಧ ಬಗೆಯ ಮರಗಿಡಗಳ ಜೊತೆಗೆ ಅವುಗಳಲ್ಲಿರುವ ಔಷಧೀಯ ಗುಣಗಳ ಮೂಲಕ ಹಲವು ಖಾಯಿಲೆಗಳನ್ನು ಗುಣಪಡಿಸುವ ಬಗೆಯನ್ನು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ನ್ಯಾಯವಾದಿ ಅಬ್ದುಲ್ ರೆಹಮಾನ್ ಮಾತನಾಡಿ , ತಮ್ಮ ಬಾಲ್ಯದ ದಿನಗಳನ್ನು ನೆನಪು ಮಾಡಿಕೊಂಡು ,ಕವಳೆ ಹಣ್ಣು, ಮಾವಿನ ಹಣ್ಣುಗಳನ್ನು ಯಾವುದೇ ಆತಂಕವಿಲ್ಲದೇ ಹೊಟ್ಟೆ ತುಂಬಾ ತಿಂದ ದಿನಗಳನ್ನು ನೆನಪಿಸಿಕೊಂಡು, ಈಗ ವಿವಿಧ ಬಗೆಯ ತಂತ್ರಜ್ಞಾನದ ಮೂಲಕ ಮಾರುಕಟ್ಟೆಯಲ್ಲಿ ಸಿಗುತ್ತಿರುವ ಹಣ್ಣು, ತರಕಾರಿ, ಸೊಪ್ಪು ಮುಂತಾದವುಗಳನ್ನು ತಿನ್ನಲು ಭಯವಾಗುತ್ತಿದೆ. ಇರುವ ಕಾಡನ್ನಾದರೂ ಉಳಿಸಿಕೊಳ್ಳಬೇಕಿದೆ ಎಂದರು.

ಚಿಂತಕ ಭಾರ್ಗವ ನಾಡಿಗ್ ಮಾತನಾಡಿ, ಇಂದು ನಾವು ಹಣ, ಆಸ್ತಿ ,ಸಂಪತ್ತಿನ ಹಿಂದೆ ಹೊರಡುವ ಮೂಲಕ ನಮ್ಮ ನೆಮ್ಮದಿಯನ್ನೇ ಕಳೆದುಕೊಂಡಿದ್ದೇವೆ. ನಮ್ಮ ಹಿರಿಯರು ಕಂಡುಕೊಂಡ ಪಾರಂಪರಿಕ ಕೃಷಿಯನ್ನು ಬದಿಗೊತ್ತಿ ಆಧುನಿಕತೆಯ ಭರಾಟೆಯಲ್ಲಿ ವಿವಿಧ ಬಗೆಯ ತಂತ್ರಜ್ಞಾನದ ತಳಿಗಳನ್ನು ಬೆಳೆಯಲು ವಿವಿಧ ಬಗೆಯ ಮಾರಕ ಔಷಧಿಗಳ ಸಿಂಪರಣೆ ಮಾಡಿ ವಿಷವನ್ನೇ ಉಣ್ಣುತ್ತಿದ್ದೇವೆ. ನಮ್ಮ ಹಳ್ಳಿಯ ಕೃಷಿ ಪದ್ಧತಿ ವಾಣಿಜ್ಯೋದ್ಯಮ ದ ಕಡೆಗೆ ಅತ್ಯಂತ ವೇಗವಾಗಿ ಹೋಗುತ್ತಿದೆ.  ಇದು ಅತ್ಯಂತ ಅಪಾಯಕಾರಿಯಾಗಿದೆ. ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ಜೀವನವನ್ನು ಕೊಂಡೊಯ್ಯುವ ಸಂಸ್ಕೃತಿ ಮಾನವೀಯ ಮೌಲ್ಯಗಳನ್ನು ವಿನಾಶಕ್ಕೆ ತಳ್ಳುವ ಮೂಲಕ ಎಲ್ಲಾ ಖಾಯಿಲೆಗಳನ್ನು ಬರಮಾಡಿಕೊಳ್ಳುತ್ತಿದ್ದೇವೆ. ಮುಂದಿನ ಪೀಳಿಗೆಗೆ ಪರಿಸರದ ಮಹತ್ವವನ್ನು ತಿಳಿಸದೇ ಹೋದರೆ ಗಂಡಾಂತರವನ್ನು ಎದುರಿಸಬೇಕಾಗುತ್ತದೆ ಎಂದರು.

ಕಸಾಪ ತಾಲ್ಲೂಕು ಮಾಜಿ ಅಧ್ಯಕ್ಷ ಎಸ್. ಕೃಷ್ಣಾನಂದ ಮಾತನಾಡಿ, ಈಗಾಗಲೇ ಪರಿಸರದ ವಿನಾಶದಿಂದ ಏನೆಲ್ಲಾ ಅನಾಹುತಗಳನ್ನು ಕಂಡಿರುವ ನಾವು ಶೇ. 36ರಷ್ಟಿರುವ ಕಾಡಿನ ಜೊತೆಗೆ ಇನ್ನಷ್ಟು ಮರಗಿಡಗಳನ್ನು ನೆಟ್ಟು ಬೆಳೆಸುವಲ್ಲಿ ನಾವು ಹೆಜ್ಜೆ ಇಡಬೇಕಾಗಿದೆ. ಬಿಸಿಲಿನ ತಾಪಕ್ಕೆ ನೀಗ೯ಲ್ಲುಗಳು ಕರಗುತ್ತಿರುವುದನ್ನು ನಾವು ಗಮನಿಸುತ್ತಿದ್ದೇವೆ.ಇದು ಮುಂದಿನ ದಿನಗಳಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಅಪಾಯದ ಮುನ್ಸೂಚನೆಯನ್ನು ವಿಜ್ಞಾನಿಗಳು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆ, ಹಿತ್ತಲು,ಹೊಲಗದ್ದೆಗಳಲ್ಲಿ ಒಂದಿಷ್ಟು ಗಿಡಗಳನ್ನು ನೆಟ್ಟು ಬೆಳೆಸಬೇಕಾಗಿದೆ. ಕೇವಲ ಜೂನ್ 5 ನೇ ತಾರೀಖಿನ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಒಂದೆರಡು ಗಿಡಗಳನ್ನು ನೆಡುವ ಕಾರ್ಯಕ್ರಮ ಮಾತ್ರ ಆಗದೇ ,ನೆಟ್ಟಿರುವ ಗಿಡಗಳನ್ನು ಸಂರಕ್ಷಣೆ ಮಾಡುವುದು ನಮ್ಮ ನಿರಂತರ ಜವಾಬ್ದಾರಿಯಾಗಿದೆ ಎಂದು  ಹೇಳಿದರು.

Also read: ಬೆಂಗಳೂರಿನಲ್ಲಿ ಜಮ್ಮು ಪೊಲೀಸರ ಆಪರೇಶನ್: ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ

ಇಂಡುವಳ್ಳಿ ಮಲೆನಾಡು ಪ್ರೌಢಶಾಲೆ ಮುಖ್ಯ ಶಿಕ್ಷಕ ಮೋಹನದಾಸ , ತಾಲ್ಲೂಕು ಯುವ ಒಕ್ಕೂಟ ಅಧ್ಯಕ್ಷ ಲಿಂಗರಾಜ ಗೌಡ್ರು ಕೋಣನಮನೆ , ತಾಲ್ಲೂಕು ಕನ್ನಡ ಸಾಂಸ್ಕೃತಿಕ ಜಗಲಿ ಗೌರವ ಸಂಚಾಲಕ ಎನ್. ಷಣ್ಮುಖಾಚಾರ್ , ವಕೀಲ ಢಾಕಪ್ಪ ಹೆಸರಿ, ಅಬ್ದುಲ್ ನಜೀರ್ ಸಾಬ್, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಸಾಹಿತಿ, ಪ್ರಕಾಶಕ ರೇವಣಪ್ಪ ಬಿದರಗೇರಿ , ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ರಾಜ್ಯ ಸಂಪನ್ಮೂಲ ವ್ಯಕ್ತಿಯಾದ ಪಾರ್ವತಿ ಎನ್. ಗೋಸಂರಕ್ಷಣಾ ತಾಲ್ಲೂಕು ಅಧ್ಯಕ್ಷ ಚಿದಾನಂದ ಗೌಡ್ರು ಜೇಡಗೇರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಶ್ರೀಪಾದ ಬಿಚ್ಚುಗತ್ತಿ, ವನಸುಮ ಕಲಾಬಳಗ ಹಾಗೂ ಅಂಗನವಾಡಿ ಶಿಕ್ಷಕಿಯರಿಗೆ ಈ ಸಂದರ್ಭದಲ್ಲಿ ಪ್ರಶಾಂತ ಹೆಚ್ ಎಂ ಹುಣವಳ್ಳಿ ಕುಟುಂಬದಿಂದ ಗೌರವಿಸಲಾಯಿತು.

ಹಿರಿಯರಾದ  ಬಿ. ಎನ್. ಸಿ. ರಾವ್ ಬರಗಿ ಅವರು ಹಲವು ಬಗೆಯ ಸಸ್ಯಗಳನ್ನು ಪರಿಚಯಿಸಿ ಅವುಗಳಿಂದ ಮನುಷ್ಯರು ಸೇರಿದಂತೆ ದನಗಳಿಗೂ ಬರುವ ಕೆಲವು ಖಾಯಿಲೆಗಳನ್ನು ಗುಣಪಡಿಸುವ ಬಗೆಯನ್ನು ತಿಳಿಸಿದರು.

ಪ್ರಶಾಂತ್ ಹೆಚ್. ಎಂ. ಅವರ ಅಮ್ಮಾ, ಅಣ್ಣಾ ಸೇರಿದಂತೆ ನಿವೃತ್ತ ಅಂಗನವಾಡಿ ಶಿಕ್ಷಕಿಯರು ವಿವಿಧ ಬಗೆಯ ಮರಗಿಡಗಳ ಎಲೆ, ಬೇರು, ಕಾಂಡ, ಚಿಗುರು, ಹೂಗಳ ಉಪಯೋಗವನ್ನು ತಿಳಿಸಿದರು. ತಾಲ್ಲೂಕಿನ ಹೆಮ್ಮೆಯ ವನಸುಮ ಕಲಾಬಳಗದ ಕಲಾವಿದರಿಂದ ಗೀತಗಾಯನ ನಡೆಯಿತು. ತಾಲ್ಲೂಕು ಯುವ ಒಕ್ಕೂಟ ಪ್ರಧಾನ ಕಾರ್ಯದರ್ಶಿ, ಅಬ್ದುಲ್ ರೆಹಮಾನ್ ರವರ ಕುಟುಂಬದವರು, ಹುಣವಳ್ಳಿ ಗ್ರಾಮಸ್ಥರು ಹಾಗೂ ಪ್ರಶಾಂತ್ ಹೆಚ್ ಎಂ ಹುಣವಳ್ಳಿ ಕುಟುಂಬದವರು ಉಪಸ್ಥಿತರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರಿನಲ್ಲಿ ಜಮ್ಮು ಪೊಲೀಸರ ಆಪರೇಶನ್: ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ

Next Post

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ನಿಬಂಧನೆಗಳನ್ನು ಸರಳಗೊಳಿಸಿ

kalpa News

kalpa News

Next Post
ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ನಿಬಂಧನೆಗಳನ್ನು ಸರಳಗೊಳಿಸಿ

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ನಿಬಂಧನೆಗಳನ್ನು ಸರಳಗೊಳಿಸಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL