ಕಲ್ಪ ಮೀಡಿಯಾ ಹೌಸ್
ಸೊರಬ: ಇಲ್ಲಿನ ಸುಪ್ರಸಿದ್ದ ಶ್ರೀ ರಂಗನಾಥ ಸ್ವಾಮಿಗೆ ಪ್ರತಿ ವರ್ಷದಂತೆ ಈ ವರ್ಷದಂತೆ ಇಂದು ನಡೆಯಬೇಕಿದ್ದ ರಥೋತ್ಸವದ ಬದಲಿಗೆ ಶ್ರೀ ಸ್ವಾಮಿಗೆ ಸರಳವಾಗಿ ಪೂಜೆ ಸಲ್ಲಿಸಲಾಯಿತು.
ಪ್ರತಿ ವರ್ಷ ವೈಶಾಖ ಹುಣ್ಣಿಮೆಯಂದು ಸ್ವಾಮಿಗೆ ಅದ್ದೂರಿಯಾಗಿ ರಥೋತ್ಸವ ನಡೆಸಲಾಗುತ್ತದೆ. ಆದರೆ, ಕಳೆದ ವರ್ಷದಂತೆ ಈ ವರ್ಷವೂ ಸಹ ಕೊರೋನಾ ಸೋಂಕು ಉಲ್ಬಣವಾಗಿರುವ ಹಿನ್ನೆಲೆಯಲ್ಲಿ ರಥೋತ್ಸವವನ್ನು ರದ್ದು ಮಾಡಲಾಗಿತ್ತು. ಆದರೆ, ಧಾರ್ಮಿಕ ವಿಧಿವಿಧಾನ ನಡೆಸಬೇಕಿದ್ದ ಹಿನ್ನೆಲೆಯಲ್ಲಿ ಸರಳವಾಗಿ ದೇವರಿಗೆ ಪೂಜೆ ಸಲ್ಲಿಸಲಾಯಿತು.
ದೇವಾಲಯದ ಪ್ರಧಾನ ಅರ್ಚಕರಾದ ನಾರಾಯಣ ಭಟ್ ಮರಾಠೆಯವರು, ಮುಂಜಾನೆಯೇ ವಿಧಿವತ್ತಾಗಿ ಹಾಗೂ ಸರಳವಾಗಿ ರಂಗನಾಥ ಸ್ವಾಮಿಯವರಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಇನ್ನಿಲ್ಲದಂತೆ ಕಾಡುತ್ತಿರುವ ಕೊರೋನಾ ಮಹಾಮಾರಿಯಿಂದ ಪ್ರಪಂಚವನ್ನು ಕಾಪಾಡಿ, ಎಲ್ಲರಿಗೂ ಉತ್ತಮ ಆರೋಗ್ಯ ದೊರೆಯುವಂತಾಗಲಿ ಎಂದವರು ಪ್ರಾರ್ಥಿಸಿದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post