ಕಲ್ಪ ಮೀಡಿಯಾ ಹೌಸ್ | ಸೊರಬ |
ಮನೆಯ ಮುಂದೆ ನಿಲ್ಲಿಸಿದ್ದ ಬೈಕ್’ಗೆ #Bike ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ತಾಲೂಕಿನ ಚಂದ್ರಗುತ್ತಿ #Chandragutti ಗ್ರಾಮದ ಬೋವಿ ಕಾಲೋನಿಯಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.
ಬೋವಿ ಕಾಲೋನಿ ನಿವಾಸಿ ದುರ್ಗಪ್ಪ ಬೋವಿ ಎಂಬುವವರಿಗೆ ಸೇರಿದ ಬೈಕ್’ಗೆ ಬೆಳಗಿನ ಜಾವ 5ಗಂಟೆ ಸುಮಾರಿಗೆ ಯಾರೋ ಕಿಡಿಗೇಡಿಗಳು ಪೆಟ್ರೋಲ್ #Petrol ಸುರಿದು ಬೆಂಕಿ ಹಚ್ಚಿದ್ದಾರೆ.
Also read: ತಪ್ಪು ಮಾಡಿದ್ದರೆ ಕ್ರಮ ತೆಗೆದುಕೊಳ್ಳಿ | ಅಧಿಕಾರಿಗಳ ಸಮಜಾಯಿಷಿಗೆ ಸಚಿವ ಮಧುಬಂಗಾರಪ್ಪ ಗರಂ
ನೆರೆ ಮನೆಯ ನಿವಾಸಿಗಳು ಬೆಂಕಿಯ ತೀವ್ರತೆ ಗಮನಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಭಾಗಶಃ ಬೈಕ್ ಸುಟ್ಟು ಹೋಗಿದೆ.
ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದುರ್ಗಪ್ಪ ಅವರ ಪುತ್ರ ಶ್ರೀಧರ್ ಒತ್ತಾಯಿಸಿದ್ದಾರೆ.
ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post