ಕಲ್ಪ ಮೀಡಿಯಾ ಹೌಸ್ | ಸೊರಬ |
ಕೃಷಿ ಯಂತ್ರಗಳ ಹಾಗೂ ಸಲಕರಣಗೆ ರೈತರಿಗೆ ಸಮರ್ಪಕವಾಗಿ ದೊರಕುವಂತೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವುದು ಹಾಗೂ ಪಟ್ಟಣದಲ್ಲಿ ನಡೆದ ಅಕ್ರಮ ನಾಟ ಸಾಗಾಟದ ಪ್ರಕರಣದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ Minister Madhu Bangarappa ಅವರಿಗೆ ಪ್ರತ್ಯೇಕ ಮನವಿ ಸಲ್ಲಿಸಲಾಯಿತು.
ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆಯಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ತಾಲೂಕಿನಲ್ಲಿ ರೈತರಿಗೆ ಅನುಕೂಲವಾಗುಂತೆ ರೈತ ಭವನ ಮಂಜೂರಾತಿ ಮಾಡಬೇಕು ಹಾಗೂ ಎಪಿಎಂಸಿಯಲ್ಲಿ ತೈತರಿಗೆ ಸಭೆ ನಡೆಸಲು ಸಭಾ ಭವನ ಕಲ್ಪಿಸುವುದು. ಇಂಡುವಳ್ಳಿ ಸುತ್ತಲಿನ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಗಾಗಿ ಇಂಡುವಳ್ಳಿಯಲ್ಲಿ ವಿದ್ಯುತ್ ಗ್ರಿಡ್ ನಿರ್ಮಿಸುವುದು ಜೊತೆಗೆ ಪಟ್ಟಣದ ಸಂತೆ ಮಾರುಕಟ್ಟೆಯಲ್ಲಿ ಈ ಹಿಂದಿನಂತೆ ಹಳೇ ಮಾರ್ಕೆಟ್ ರಸ್ತೆಗೆ ಸ್ಥಳಾಂತರಿಸುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ಪಟ್ಟಣದ ಹಳೇ ತಾಲೂಕು ಕಚೇರಿಯ ಅಕ್ರಮವಾಗಿ ಕೋಟ್ಯಂತರ ರೂ., ಮೌಲ್ಯದ ಹಳೇ ನಾಟವನ್ನು ಸಾಗಾಟ ಮಾಡಲಾಗಿದೆ. ಈ ಬಗ್ಗೆ ಅನೇಕ ಹೋರಾಟಗಳನ್ನು ನಡೆಸಿ, ಜಿಲ್ಲಾಧಿಕಾರಿಗಳಿಗೂ ದೂರನ್ನು ಸಲ್ಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರು ತನಿಖೆ ನಡೆಸಿದ್ದು, ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಈ ವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ನಿಟ್ಟಿನಲ್ಲಿ ತಾವುಗಳು ತಪ್ಪಿತಸ್ಥರಿಗೆ ಸೂಕ್ತ ಕಾನೂನು ಕ್ರಮಕ್ಕೆ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಬೇಕು ಎಂದು ಮತ್ತೊಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
Also read: ಪ್ರತಿಯೊಬ್ಬರೂ ಎರಡು ಗಿಡಗಳನ್ನಾದರೂ ನೆಟ್ಟು ಪ್ರಕೃತಿ ಉಳಿಸಿ: ಚಿದಾನಂದಪ್ಪ ಕರೆ
ಇದೇ ಸಂದರ್ಭದಲ್ಲಿ ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ರೈತ ಸಂಘದಿಂದ ಅಭಿನಂದಿಸಲಾಯಿತು.
ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಎನ್.ಕೆ. ಮಂಜುನಾಥ ಗೌಡ, ರಾಜ್ಯ ಸಂಚಾಲಕ ಉಮೇಶ್ ಎನ್. ಪಾಟೀಲ್, ಜಿಲ್ಲಾಧ್ಯಕ್ಷ ಸೈಯದ್ ಶಫಿವುಲ್ಲಾ, ತಾಲೂಕು ಅಧ್ಯಕ್ಷ ಈಶ್ವರಪ್ಪ ಕೊಡಕಣಿ, ಹುಚ್ಚಪ್ಪ ಉಳವಿ, ಚಿತ್ರಶೇಖರಗೌಡ, ವಿಜಯಕುಮಾರ್, ಎಂ.ಡಿ. ಭಾಸ್ಕರ್, ಮಂಜಪ್ಪ ಸೇರಿದಂತೆ ಇತರರಿದ್ದರು.
ವರದಿ: ಮಧುರಾಮ್ ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post